logo
WhatsApp Image 2026-04-02 at 14.46.04.jpeg
hindalco everlast.jpeg

ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ : ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
27 Sept 2023
post image

ಉಡುಪಿ : ಉಡುಪಿ ಅಂಚೆ ವಿಭಾಗದ ವತಿಯಿಂದ ನವೆಂಬರ್ 18 ಮತ್ತು 19 ರಂದು ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ ಕೃಷ್ಣಾಪೆಕ್ಸ್ - 2023 ಆಯೋಜಿಸಿದ್ದು, ಈ ಸಂಬಂಧ ಕೃಷ್ಣಾಪೆಕ್ಸ್ 2023 ಲಾಂಛನವನ್ನು ಅನಾವರಣಗೊಳಿಸಿದ್ದು, ಜಿಲ್ಲೆಯಲ್ಲಿರುವ ಅಂಚೆ ಚೀಟಿ ಪ್ರದರ್ಶನಕಾರರಿಗೆ ಅಂಚೆ ಚೀಟಿ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಇಪ್ಪತ್ತು ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ ಕಿರಿಯರಿಗೆ ಎಂಬ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಅಂಚೆ ಅಧೀಕ್ಷಕರ ಕಚೇರಿ, ಅಂಚೆ ವಿಭಾಗ, ಉಡುಪಿ ಮೊ.ನಂ: 9449332706 ನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.