logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ

ಟ್ರೆಂಡಿಂಗ್
share whatsappshare facebookshare telegram
3 Mar 2022
post image

ಉಡುಪಿ, : ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ವಿಳಂಬವಿಲ್ಲದೇ ಜನರಿಗೆ ತಲುಪಿಸುವ ಕಾರ್ಯವನ್ನು ಕ್ರಿಯಾಶೀಲರಾಗಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಬಿ.ಬಿ.ಎಂ.ಪಿ ವಿಶೇಷ ಆಯುಕ್ತರಾದ ಮನೋಜ್ ಜೈನ್ ಅವರು ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ಜನರ ಆಶೋತ್ತರಗಳನ್ನು ನೆರವೇರಿಸಲು ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದ್ದು, ಪ್ರತಿಶತಃ ನೂರರಷ್ಟು ಅನುಷ್ಠಾನಗೊಳಿಸುವುದರೊಂದಿಗೆ ಯಾವುದೇ ಅನುದಾನ ವಾಪಾಸು ಹೋಗದಂತೆ ಕಾರ್ಯನಿರ್ವಹಿಸಬೇಕು ಎಂದರು. ಕಳೆದ ಕೋವಿಡ್ ಅಲೆಗಳಲ್ಲಿ ಮೃತಪಟ್ಟವರಿಗೆ ಪರಿಹಾರದ ಮೊತ್ತವನ್ನು ಆದಷ್ಟು ಶೀಘ್ರದಲ್ಲಿಯೇ ತಲುಪಿಸುವ ಕೆಲಸವಾಗಬೇಕು. ಜಿಲ್ಲೆಯಲ್ಲಿ 1515 ಪ್ರಕರಣಗಳಲ್ಲಿ 740 ಪ್ರಕರಣಗಳಿಗೆ ಮಾತ್ರ ಪರಿಹಾರ ನೀಡಲಾಗಿದ್ದು, 719 ಪ್ರಕರಣಗಳು ಬಾಕಿ ಉಳಿದಿವೆ. ಇವುಗಳನ್ನು ಶೀಘ್ರದಲ್ಲಿಯೇ ಪರಿಹಾರ ನೀಡುವ ಕಾರ್ಯವನ್ನು ಗ್ರಾಮಲೆಕ್ಕಿಗರು ಮಾಹಿತಿ ಕ್ರೋಢಿಕರಿಸಿ, ಏಳು ದಿನಗಳ ಒಳಗೆ ಪರಿಹಾರ ತಲುಪಿಸುವ ಕಾರ್ಯವಾಗಬೇಕು ಎಂದರು. ಬೇಸಿಗೆಯಲ್ಲಿ ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದAತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು. ಕಂದಾಯ ಇಲಾಖೆಗೆ ಬಂದಿರುವ ಫಾರಂ ನಂ. 50, 53, 94 ಸೇರಿದಂತೆ ಮತ್ತಿತರ ಅರ್ಜಿಗಳನ್ನು ಶೀಘ್ರದಲ್ಲಿಯೇ ವಿಲೇವಾರಿ ಮಾಡಬೇಕು. ಸಕಾಲ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಗದಿತ ಕಾಲಾವಧಿಯಲ್ಲಿ ವಿಲೇವಾರಿ ಮಾಡಬೇಕು ಎಂದರು. ಜಿಲ್ಲೆಯಲ್ಲಿ ಧಾರ್ಮಿಕ ಪ್ರವಾಸೋದ್ಯಮದ ಜೊತೆಗೆ ಇತರೆ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದರೊಂದಿಗೆ ಹೆಚ್ಚು ಪ್ರವಾಸಿಗರು ಆಗಮಿಸುವಂತೆ ಕಾರ್ಯಪ್ರವೃತ್ತರಾಗಬೇಕು ಎಂದ ಅವರು, ಜಿಲ್ಲೆಯಲ್ಲಿ ಹಲವು ಹಿನ್ನೀರಿನ ಪ್ರದೇಶಗಳಿದ್ದು, ಗೋವಾ ಹಾಗೂ ಕೇರಳಗಳನ್ನು ಮೀರಿಸುವಂತಹ ಪ್ರವಾಸೋದ್ಯಮ ಉತ್ತೇಜಿಸುವ ಕೆಲಸವಾಗಬೇಕು ಎಂದರು. ಕೇಂದ್ರ ಸರ್ಕಾರ ಬೀದಿ ಬದಿಗಳ ವ್ಯಾಪಾರಿಗಳಿಗೆ ಆರ್ಥಿಕ ಸವಲತ್ತುಗಳನ್ನು ನೀಡಲು ಪ್ರಧಾನಮಂತ್ರಿ ಎಸ್.ವಿ.ಎ ನಿಧಿಯ ಅನುಷ್ಠಾನ ಜಿಲ್ಲೆಯ ಇತರೆ ತಾಲೂಕುಗಳಿಗೆ ಹೋಲಿಸಿದ್ದಲ್ಲಿ ಉಡುಪಿ ನಗರದಲ್ಲಿ ಅನುಷ್ಠಾನ ಕುಂಠಿತವಾಗಿದೆ. ಇದು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಬೇಕು ಎಂದು ಸೂಚನೆ ನೀಡಿದರು. ನಗರ ಪ್ರದೇಶಗಳಿಗೆ ಮೂಲ ಸೌಕರ್ಯಗಳು ಸೇರಿದಂತೆ ಕುಡಿಯುವ ನೀರನ್ನು ಒದಗಿಸುವ ನಗರೋತ್ಥಾನದ ಎರಡನೇ ಹಂತ ಹಾಗೂ ಅಮೃತ್ ಯೋಜನೆಯ ಅನುದಾನವನ್ನು ಸಮರ್ಪಕ ಬಳಕೆ ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದ ಪ್ರತಿ ಮನೆ ಮನೆಗೆ ಕುಡಿಯುವ ನೀರಿನ ನಳವನ್ನು ಒದಗಿಸಲು ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಈಗಾಗಲೇ 24,270 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗಿದ್ದು, ಬಾಕಿ ಉಳಿದ 65,700 ಮನೆಗಳಿಗೆ ಶೀಘ್ರದಲ್ಲಿಯೇ ಕಾರ್ಯಗತಗೊಳಿಸಬೇಕು ಎಂದರು. ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಯೋಜನೆಯ ಅನುದಾನದಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನರಿಗೆ ದೈನಂದಿನ ಉಪಯೋಗಕ್ಕೆ ಅಗತ್ಯವಿರುವ ವಸ್ತುಗಳ ಮಾರಾಟ ಮಳಿಗೆಗಳನ್ನು ತೆರೆಯಲು ಉತ್ತೇಜಿಸುವುದರೊಂದಿಗೆ ಸ್ವಂತ ಉದ್ಯೋಗ ಕೈಗೊಳ್ಳಲು ಅನುವು ಮಾಡಿಕೊಡಬೇಕು ಎಂದರು. ಪ್ರಗತಿ ಪರಿಶೀಲನಾ ಸಭೆಗೆ ಸಮರ್ಪಕ ಮಾಹಿತಿ ಒದಗಿಸದ ಕೆಲವು ಇಲಾಖೆಯ ಕಾರ್ಯವೈಖರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಗೈರು ಹಾಜರಾದವರಿಗೆ ಕಾರಣ ಕೇಳಿ, ನೋಟೀಸ್ ನೀಡುವಂತೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.