



ಉಡುಪಿ, :: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ - 4 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ತಂತ್ರಜ್ಞಾನ, ಆಹಾರ ಇಂಜಿನಿಯರಿAಗ್‌ನಲ್ಲಿ ಡಿಪ್ಲೋಮಾ ಹಾಗೂ ಪದವಿ ಹೊಂದಿರುವ, ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ ಕುರಿತು 3 ರಿಂದ 5 ವರ್ಷಗಳ ಅನುಭವ ಹೊಂದಿರುವ ಹಾಗೂ ಆಹಾರ ಸಂಸ್ಕರಣಾ ಕೈಗಾರಿಕೆ, ಬ್ಯಾಂಕಿAಗ್, ಡಿಪಿಆರ್ ಸಿದ್ಧಪಡಿಸುವಿಕೆ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಏಪ್ರಿಲ್ 25 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಜಿಲ್ಲಾ ಆಡಳಿತ ಕಛೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಕಛೇರಿಯನ್ನು ಸಂಪರ್ಕಿಸುವAತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.