



ದೊಡ್ಡಣ್ಣಗುಡ್ಡೆ: ಶ್ರೀಚಕ್ರ ಪೀಠ ಸರಪೋಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ನಾಗಾಲಯದಲ್ಲಿ ಆ. 21ರ ಸೋಮವಾರ ನಾಗರಪಂಚಮಿ ಆಚರಣೆ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅರ್ಚಕ ಅನಿಶ್ ಆಚಾರ್ಯರ ನೇತೃತ್ವದಲ್ಲಿ ನೆರವೇರಲಿರುವುದು.
ಆ ಪ್ರಯುಕ್ತ ನಾಗರಾಜ ನಾಗರಾಣಿಯ ಸನ್ನಿಧಾನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಾಮೂಹಿಕ ವಿಶೇಷ ತನು ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಪ್ರಸನ್ನ ಪೂಜೆ, ಮಹಾಪ್ರಸಾದ ವಿತರಣೆ ನೆರವೇರಲಿರುವುದು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.