



ಕುಂದಾಪುರ: ಫೆ.07 ರಂದು ಕೆನರಾ ಬ್ಯಾಂಕ್ ನವರು ನೂತನ ಜನರೇಟರ್ ನ್ನು ಶ್ರೀ ವೆಂಕಟರಮಣ ಸಂಸ್ಥೆಗೆ ಕೊಡುಗೆಯಾಗಿ ನೀಡಿದ್ದಾರೆ. ಕೆನರಾ ಬ್ಯಾಂಕ್ ಮಣಿಪಾಲ್ ಇಲ್ಲಿನ ಪ್ರಧಾನ ವ್ಯವಸ್ಥಾಪಕರಾದ ಎಂ. ಜಿ. ಪಂಡಿತ್ ನೂತನ ಜನರೇಟರ್ ನ್ನು ಉದ್ಘಾಟಿಸಿ, ಸಂಸ್ಥೆಗೆ ಶುಭ ಹಾರೈಸಿದರು.
ಕುಂದಾಪುರ ಕೆನರಾ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕರಾದ ಶ್ರೀಮತಿ ಭಾರತಿ ವಸಂತ್, ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಶ್ರೀ. ಕೆ. ರಾಧಾಕೃಷ್ಣ ಶೆಣೈ, ಶ್ರೀ ವೆಂಕಟರಮಣ ಸಂಸ್ಥೆಯ ಖಜಾಂಚಿ ಶ್ರೀ. ಕೆ. ಲಕ್ಷ್ಮೀ ನಾರಾಯಣ ಶೆಣೈ, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ರಾಗಿಣಿ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರಮೀಳಾ ಡಿಸೋಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕಿ ಸುಖಿತಾ ಸುವರ್ಣ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮವನ್ನು ನಿರ್ವಹಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.