logo
WhatsApp Image 2026-04-02 at 14.46.04.jpeg
hindalco everlast.jpeg

ಕ್ರಿಯೇಟಿವ್‌ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ| ಬಿ. ಆರ್‌. ಅಂಬೇಡ್ಕರ್‌ ಜಯಂತಿ ಆಚರಣೆ

ಟ್ರೆಂಡಿಂಗ್
share whatsappshare facebookshare telegram
14 Apr 2023
post image

ಕಾರ್ಕಳ: ಸಂವಿಧಾನ ಶಿಲ್ಪಿ ಡಾ| ಬಿ ಆರ್‌ ಅಂಬೇಡ್ಕರ್‌ ರವರ 132 ನೇ ಜಯಂತಿಯನ್ನು ಎ.14ನೇ ಶುಕ್ರವಾರ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು.

ವಿದೇಶದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್‌ (ಪಿಹೆಚ್‌ಡಿ) ಪದವಿ ಪಡೆದ ಮೊದಲ ಭಾರತೀಯ. ಇವರು ಸುಮಾರು 64 ವಿಷಯಗಳಲ್ಲಿ ಸ್ನಾತಕೊತ್ತರ ಪದವಿಗಳನ್ನು ಹಾಗೂ ಒಂಬತ್ತು ಭಾಷೆಗಳನ್ನು ಬಲ್ಲವರಾಗಿದ್ದರು. ವಿಶ್ವದರ್ಜೆಯ ವಕೀಲರು, ಸಾಮಾಜ ಸುಧಾರಕರೂ ಆಗಿದ್ದವರು. ಭಾರತದ ದಲಿತ ಚಳವಳಿಗಳ ಹಿಂದಿನ ಶಕ್ತಿ ಎಂಬ ಹೆಗ್ಗಳಿಕೆಯೂ ಇವರದ್ದು ಎಂಬುದನ್ನು ಸ್ಮರಿಸುತ್ತಾ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಇವರು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕ್ರಿಯೇಟಿವ್‌ ವಿದ್ಯಾಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಲಿಶನ್‌ ಗೌಡ , ಆಡಳಿತಾಧಿಕಾರಿ ಜಯಪ್ರಕಾಶ್‌ ಶೆಟ್ಟಿ, ಉಪನ್ಯಾಸಕರಾದ ಸುಮಂತ ದಾಮ್ಲೆ, ಶಶಿರಾಜ್‌, ಕುಮಾರಿ ಅಕ್ಷತಾ, ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.