



ಉಡುಪಿ: ಕನ್ನಡ ಚಿತ್ರರಂಗದ ಮೇರು ನಟ ಡಾ ರಾಜ್‌ಕುಮಾರ್ ಅವರು , ಅತ್ಯುತ್ತಮ ನಟನೆಯನ್ನು ಚಲನಚಿತ್ರಗಳನ್ನು ಮಾಡುವುದರ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ಸಹ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್. ಎಂ. ತಿಳಿಸಿದರು. ಅವರು ಇಂದು ವಾರ್ತಾ ಭವನದಲ್ಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಡೆದ ಡಾ ರಾಜ್‌ಕುಮಾರ್ ಜನ್ಮ ದಿನಾಚರಣೆಯಲ್ಲಿ ಡಾ.ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಡಾ ರಾಜ್‌ಕುಮಾರ್ ಅವರು ಅನೇಕ ಚಿತ್ರಗಳನ್ನು ನಾನೂ ನೋಡಿದ್ದೇನೆ. ಸಹಜ ನಟನೆಯ ಮೂಲಕ ಜನರಿಗೆ ತೀರ ಹತ್ತಿರವಾಗಿದ್ದರು. ಅವರು ಜನಮಾನಸದ ನ್ಯಾಚುರಲ್ ಸೂಪರ್ ಸ್ಟಾರ್ ಆಗಿದ್ದಾರೆ ಡಾ ರಾಜ್‌ಕುಮಾರ್ ಅವರದ್ದು ಆದರ್ಶಮಯ ಬದುಕು ಎಂದರು. ಡಾ|| ರಾಜ್‌ಕುಮಾರ್ ಅವರ ಒಂದೊAದು ಚಲನಚಿತ್ರಗಳೂ ಮಾನವತಾ ಸಂದೇಶಗಳನ್ನು ನೀಡುವುದರೊಂದಿಗೆ ಸಮಾಜದ ಸ್ವಾಸ್ಥö್ಯವನ್ನು ಕಾಪಾಡಿವೆ. ಇವು ಅವರ ಜನಪ್ರಿಯತೆಗೆ ಸಾಕ್ಷಿಯಾಗಿ, ಈಗಲೂ ಸಹ ಜನ ಮಾನಸದಲ್ಲಿದ್ದಾರೆ ಎಂದರು. ಅಪರ ಜಿಲ್ಲಾಧಿಕಾರಿ ವೀಣಾ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಹಾಗೂ ಮೊದಲಾದವರು ಇದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.