



ಮಂಗಳೂರು: ಮಂಗಳೂರು ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಇದರ ಪ್ರಾಂಶುಪಾಲರಾದ ಡಾ.ಸಲೀಮುಲ್ಲಾ ಖಾನ್ ಇವರನ್ನು ಕರ್ನಾಟಕ ಸರಕಾರವು ಫಾರ್ಮಸಿ ಕಾಯ್ದೆ 1948 ರ ಸೆಕ್ಷನ್ 3(ಎಚ್) ಅಡಿಯಲ್ಲಿ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಸೆಂಟ್ರಲ್ ಕೌನ್ಸಿಲ್ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದು, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಡಾ.ಸಲೀಮುಲ್ಲಾ ಖಾನ್ ಇವರನ್ನು 5 ವರ್ಷಗಳ ಅವಧಿಗೆ ಸೆಂಟ್ರಲ್ ಕೌನ್ಸಿಲ್ ಸದಸ್ಯರಾಗಿ ನೇಮಿಸಿದೆ.
ಇವರು ಬೆಂಗಳೂರಿನ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿದ್ದು,ಸುಮಾರು 22 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದಾರೆ. ಊಟಿಯ ಜೆಎಸ್ಎಸ್ ಕಾಲೇಜು ಫಾರ್ಮಸಿ ಮತ್ತು ಮಣಿಪಾಲದ ಮಣಿಪಾಲ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ನಲ್ಲಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ 2018 ರಿಂದ ಪಿಎ ಕಾಲೇಜ್ ಆಫ್ ಫಾರ್ಮಸಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.