



ಉಡುಪಿ: ವಿಧಾನ ಪರಿಷತ್ ಚುನಾವಣಾ ಅಖಾಡಕ್ಕೆ ಇಳಿದಿದ್ದ ಸಹಕಾರಿ ಧುರೀಣ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು, ಕಡೆಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ದಿಢೀರ್ ಆದ ರಾಜಕೀಯ ಬೆಳವಣಿಗೆಯಿಂದಾಗಿ ಎಂಎನ್ ಆರ್ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವುದಾಗಿ ಹೇಳಿದ್ದಾರೆ. ಆ ಮೂಲಕ ರಾಜಕೀಯ ರಂಗ ಪ್ರವೇಶ ಮಾಡುವ ಕನಸಿಗೆ ತೆರೆಎಳೆದಿದ್ದಾರೆ.
ಈ ಹಿಂದೆ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಘೋಷಿಸಿದ್ದರು. ಇದು ಕರಾವಳಿ ರಾಜಕಾರಣದಲ್ಲಿ ಭಾರೀ ಸಂಚಲನ ಉಂಟು ಮಾಡಿತ್ತು. ಅಲ್ಲದೆ, ರಾಜಕೀಯ ನಾಯಕರಿಗೂ ನಡುಕ ಹುಟ್ಟಿಸಿತ್ತು.
ಆರಂಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದ ಅವರು, ಬಳಿಕ ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧಿಸಲು ಮುಂದಾಗಿದ್ದರು. ಆದರೆ ಇದೀಗ ಚುನಾವಣಾ ಅಖಾಡದಿಂದ ಹಿಂದೆ ಸರಿದಿರುವ ಎಂ. ಎನ್ ರಾಜೇಂದ್ರ ಕುಮಾರ್ ಅವರು, ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.