



ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಮೂವರಿಗೆ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ (ಡಿ.ಲಿಟ್) ಪ್ರದಾನ ಮಾಡಲಿದೆ ಎಂದು ಕುಲಪತಿ ಪ್ರೊ. ಶರಣಪ್ಪ ಹಲಸೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜುಲೈ 2 ರಂದು ನಡೆಯಲಿರುವ ವಾರ್ಷಿಕ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಶಿಕ್ಷಣ ತಜ್ಞರಾದ ಎನ್.ರಾಮಚಂದ್ರಯ್ಯ ಹಾಗೂ ವೆಂಕಟ ಲಕ್ಷ್ಮಿನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು, ಈ ವಿಷಯವನ್ನು ರಾಷ್ಟ್ರಪತಿ ಅವರಿಗೆ ತಿಳಿಸಲಾಗಿದೆ. ಒಂದು ವೇಳೆ ಆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಬರದಿದ್ದರೆ ಜುಲೈ 3 ರಂದು ಅವರು ರಾಜ್ಯ ಪ್ರವಾಸ ಕೈಗೊಳ್ಳಲಿರುವ ವೇಳೆ ಬೆಂಗಳೂರಿನ ರಾಜಭವನದಲ್ಲಿ ಪ್ರದಾನ ಮಾಡಲಾಗುವುದು ಎಂದರು.
ಘಟಿಕೋತ್ಸವದಲ್ಲಿ 1 ಪಿಹೆಚ್ ಡಿ, 44 ಚಿನ್ನದ ಪದಕ , 27 ನಗದು ಬಹುಮಾನ ನೀಡಲಾಗುವುದು, ಒಟ್ಟು 8,722 ಅಭ್ಯರ್ಥಿಗಳು ವಿವಿಧ ಪದವಿ ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.