



ಬೆಳಗಾವಿ: ಭಾರೀ ಮಳೆಯಿಂದಾಗಿ ಪ್ರಸಿದ್ಧ ಪ್ರವಾಸಿ ಸ್ಥಳ ದೂಧ್ ಸಾಗರ ಜಲಾಶಯದ ಬಳಿ ಎರಡು ಕಡೆ ಭೂ ಕುಸಿತ ಸಂಭವಿಸಿದೆ.
ರೈಲು ಹಳಿಗಳ ಬಳಿ ಗುಡ್ಡ ಕುಸಿತ ಸಂಭವಿಸಿರುವುದರಿಂದ ಕೆಲ ರೈಲುಗಳ ಮಾರ್ಗಗಳನ್ನು ಬದಲಾಯಿಸಿದ್ದು, ಕೆಲವನ್ನು ರದ್ದುಗೊಳಿಸಲಾಗಿದೆ. ಭೂಕುಸಿತದಿಂದ ಯಾವುದೇ ಹಾನಿ ಸಂಭವಿಸಿಲ್ಲ.
ಮಂಗಳವಾರ ರಾತ್ರಿ ಗೋವಾದಿಂದ ಬೆಳಗಾವಿ ಮೂಲಕ ದೆಹಲಿಗೆ ತೆರಳಬೇಕಿದ್ದ ನಿಜಾಮುದ್ದೀನ್ ಎಕ್ಸಪ್ರೆಸ್ ರೈಲು ಮುಂಬೈ ಮಾರ್ಗದ ಮೂಲಕ ಸಂಚರಿಸಿತು. ಭಾನುವಾರ ರಾತ್ರಿ ದೆಹಲಿಯಿಂದ ಗೋವಾಗೆ ಹೊರಟಿದ್ದ ರೈಲನ್ನು ಬೆಳಗಾವಿಗೇ ನಿಲ್ಲಿಸಲಾಯಿತು. ಬುಧವಾರ ಬೆಳಿಗ್ಗೆ ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಮಾಡಿ ಗೋವಾಗೆ ಕಳುಹಿಸಲಾಗಿದೆ.
ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿರುವುದರಿಂದ ದೂಧ್ ಸಾಗರ್ ನಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಅಪಾಯದ ಸಾಧ್ಯತೆ ಇದ್ದುದರಿಂದ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.