



ನೇಪಾಳ :ಮಂಗಳವಾರ ಉಸಿರಾಟದ ಮಟ್ಟ ಕಡಿಮೆಯಾದ ಕಾರಣ, ನೇಪಾಳದ ಅಧ್ಯಕ್ಷ ರಾಮಚಂದ್ರ ಪೌಡೆಲ್ ರನ್ನು ಕಲ್ಮಂಡುವಿನ ಮಹಾರಾಜ್‌ಗಂಜ್ ತ್ರಿಭುವನ್ ವಿಶ್ವವಿದ್ಯಾಲಯದ ಬೋಧನಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ನಡೆಸಿದ ವೈದ್ಯಕೀಯ ಪರೀಕ್ಷೆಯ ಮುಖಾಂತರ ಪೌಡೆಲ್ ಶ್ವಾಸಕೋಶದಲ್ಲಿ ಸೋಂಕು ಇರುವುದು ಪತ್ತೆಯಾಯಿತು.
ಉತ್ತಮ ಚಿಕಿತ್ಸೆಗಾಗಿ ಅವರನ್ನು ಬುಧವಾರ ದೆಹಲಿ ಏಮ್ಸ್‌ಗೆ ಸ್ಥಳಾಂತರಿಸಲಾಗಿದೆ ಎಂದು ಪೌಡೆಲ್ ಸಲಹೆಗಾರ ಸ್ಪಷ್ಟಪಡಿಸಿದ್ದಾರೆ. ‘ಅಧ್ಯಕ್ಷರಿಗೆ ಆಮ್ಲಜನಕದ ಪ್ರಮಾಣ ಕಡಿಮೆಯಾದ ತಕ್ಷಣ ನಾವು ಅವರನ್ನು ಆಸ್ಪತ್ರೆಗೆ ಸೇರಿಸಿದೆವು. ಕಳೆದ 15 ದಿನಗಳಿಂದ ಆ್ಯಂಟಿಬಯೋಟಿಕ್ಸ್ ಸೇವಿಸುತ್ತಿದ್ದಾರಾದರೂ, ಅವರ ಆರೋಗ್ಯದಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ’ ಎಂದರು.
ಪೌಡೆಲ್ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದ ಪ್ರಧಾನಿ ಪುಷ್ಪ ಕಮಲ್ ದಹಲ್ ಏಮ್ಸ್ ಆಸ್ಪತ್ರೆಗೆ ತೆರಳಿದ್ದಾರೆ.
ಒಂದು ತಿಂಗಳೊಳಗೆ ಪೌಡೆಲ್ ಆಸ್ಪತ್ರೆಗೆ ದಾಖಲಾಗಿರುವುದು ಇದು ಎರಡನೇ ಬಾರಿ, ಕಳೆದ ವಾರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅವರ ಚಿಕಿತ್ಸೆಗೆ ಸರ್ಕಾರಿ ಅಧಿಕಾರಿಗಳನ್ನು ನೇಮಿಸಲು ನಿರ್ಧರಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.