logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಆನೆ ದಾಂಧಲೆ: ಅಂಬಾರಿ ಜಾರಿ ಬಿದ್ದು ಹಾನಿ, ಜನರಲ್ಲಿ ಆತಂಕ

ಟ್ರೆಂಡಿಂಗ್
share whatsappshare facebookshare telegram
21 Oct 2026
post image

ಶಿವಮೊಗ್ಗ: ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ 450 ಕೆಜಿ ತೂಕದ ಬೆಳ್ಳಿ ಅಂಬಾರಿಯನ್ನು ಹೊತ್ತಿದ್ದ ಸೋಮಣ್ಣ ಆನೆ ದಿಢೀರ್‌ ದಿಕ್ಕಾಪಾಲಾಗಿ ಓಡಿದ ಘಟನೆ ಆತಂಕ ಸೃಷ್ಟಿಸಿದೆ. ಆನೆಯ ಓಟದಿಂದ ಗಾಬರಿಗೊಂಡ ಜನರು ಸ್ಥಳದಿಂದ ಓಡಿಹೋಗಿದ್ದಾರೆ. ಈ ವೇಳೆ ಕಾರುಗಳಿಗೆ ಹಾನಿಯಾಗಿದ್ದು, ಅಂಬಾರಿಗೂ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ವರದಿಯಾಗಿದೆ.

ನಗರದ ಶಿವಪ್ಪನಾಯಕ ಅರಮನೆಯಿಂದ ಜಂಬೂಸವಾರಿ ಆರಂಭವಾಗಿತ್ತು. ಸ್ವಲ್ಪ ದೂರ ಸಾಗುತ್ತಿದ್ದಂತೆ ಕೋಟೆ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸೋಮಣ್ಣ ಆನೆ ಅಡ್ಡಾದಿಡ್ಡಿಯಾಗಿ ಓಡಿದೆ. ಇದರಿಂದ ಮೆರವಣಿಗೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೆಲವು ಕಾರುಗಳು ಜಖಂಗೊಂಡಿವೆ. ಆನೆಯ ಓಟದ ವೇಳೆ ಅಂಬಾರಿ ಜಾರಿ ಬಿದ್ದಿದೆ ಎಂದು ತಿಳಿದುಬಂದಿದೆ.

ಆನೆಯನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಚುಚ್ಚುಮದ್ದು ನೀಡಿದ್ದು, ಬಳಿಕ ಆನೆ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಜಂಬೂಸವಾರಿಯನ್ನು ಸ್ಥಗಿತಗೊಳಿಸಲಾಗಿದೆ.

ಕೊನೆಯ ಕ್ಷಣದಲ್ಲಿ ಬದಲಾದ ಅಂಬಾರಿ ಹೊರುವ ಆನೆ

ಶಿವಮೊಗ್ಗ ದಸರಾದಲ್ಲಿ ಅಂಬಾರಿ ಹೊರಲು ಸಾಗರ್‌ ಆನೆಗೆ ತರಬೇತಿ ನೀಡಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಸಾಗರ್‌ ಆನೆಗೆ ಕಾಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮಣ್ಣ ಆನೆಗೆ ಅಂಬಾರಿ ಹೊರಿಸುವ ನಿರ್ಧಾರ ಕೈಗೊಳ್ಳಲಾಗಿತ್ತು ಎನ್ನಲಾಗಿದೆ.

ಸೋಮಣ್ಣ ಆನೆಗೆ ಅಂಬಾರಿ ಹೊರುವ ಸೂಕ್ತ ತಾಲೀಮು ದೊರೆಯದಿರುವುದು ಈ ಅವಘಡಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ. ಆದರೆ, ಘಟನೆಯ ನಿಖರ ಕಾರಣದ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.