



ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಮಂಗಳವಾರ ಹದ್ದು ಡಿಕ್ಕಿ ಹೊಡೆದಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ.
ಮುಳಬಾಗಿಲಿನಲ್ಲಿ ಚುನಾವಣಾ ಪ್ರಚಾರಕ್ಕಾಗಿ ಶಿವಕುಮಾರ್ ಬೆಂಗಳೂರಿನ ಜಕ್ಕೂರು ಹೆಲಿಪ್ಯಾಡ್‌ನಿಂದ ಕೋಲಾರಕ್ಕೆ ಪ್ರಯಾಣ ಆರಂಭಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್‌ನ ಗಾಜು ಪುಡಿಪುಡಿಯಾಗಿದೆ. ಹೀಗಾಗಿ ಅವರಿದ್ದ ಹೆಲಿಕಾಪ್ಟರ್ ಎಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.
ಪೈಲಟ್ ಹರಸಾಹಸದಿಂದ ಭಾರೀ ಅನುಹುತ ತಪ್ಪಿದ್ದು ಕೂದಲೆಳೆ ಅಂತರದಲ್ಲಿ ಶಿವಕುಮಾರ್ ಅಪಾಯದಿಂದ ಪಾರಾಗಿದ್ದಾರೆ. ಶಿವಕುಮಾರ್ ಜತೆಗಿದ್ದ ಇತರ ಕೆಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ವಿಚಲಿತರಾದ ಡಿಕೆ ಶಿವಕುಮಾರ್ ರಸ್ತೆ ಮಾರ್ಗದ ಮೂಲಕ ಕೋಲಾರಕ್ಕೆ ಪ್ರಯಾಣ ಬೆಳೆಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.