



ದೆಹರಾದೂನ್: ಖಂಡದಲ್ಲಿ ಕುಂಭದ್ರೋಣ ಮಳೆ ಯಿಂದ ಜನ ತತ್ತರಿಸಿದ್ದು ನಿನ್ನೆ ಎಂಟು ಮೃತದೇಹಗಳು ಪತ್ತೆಯಾಗಿವೆ. ಮಳೆ ಪ್ರವಾಹದಿಂದ ಸಿಲುಕಿ ಮೃತಪಟ್ಟವರ ಸಂಖ್ಯೆ 60 ಕ್ಕೆ ಏರಿಕೆಯಾಗಿದೆ. ಕಳೆದ ಎರಡು ದಿನದಿಂದ ಉತ್ತರಪ್ರದೇಶದ ಬರೇಲಿ ಮತ್ತು ಫಿಲಿಬತ್ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮಳೆಗೆ ಸಿಲುಕಿ ಮೂವರು ಮೃತಪಟ್ಟಿದ್ದು, ನೂರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ಮಳೆಯಲ್ಲಿ ಪ್ರವಾಹದಲ್ಲಿ ನಾಪತ್ತೆಯಾಗಿರುವವರೆಲ್ಲ ಟ್ರೆಕ್ಕಿಂಗ್‌ಗೆ ತೆರಳಿದ್ದರು ಎನ್ನಲಾಗಿದೆ. ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಉಧಮ್ ಸಿಂಗ್ ನಗರ ಮತ್ತು ಚಂಪಾವತ್ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.