



ಪೋರ್ಟ್ ಬ್ಲೇರ್: ಅಂಡಮಾನ್ ನಿಕೋಬಾರ್ ದ್ವೀಪ ಸಮೂಹದಲ್ಲಿ ಇಂದು ಮುಂಜಾನೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 5ರಷ್ಟು ದಾಖಲಾಗಿದೆ. ಮುಂಜಾನೆ 5.07ಕ್ಕೆ ಭೂಮಿ ಕಂಪಿಸಿದೆ ಎಂದು ಭೂಗರ್ಭ ಅಧ್ಯಯನ ಇಲಾಖೆ ತಿಳಿಸಿದೆ.
ಭೂಕಂಪನದಿಂದ ಯಾವುದೇ ಹಾನಿಯಾದ ಬಗ್ಗೆ ಇದುವರೆಗೆ ವರದಿಯಾಗಿಲ್ಲ. ಅಂಡಮಾನ್ ನಿಕೋಬಾರ್ ದ್ವೀಪ ಸಮೂಹದ ಕೆಲವು ದ್ವೀಪಗಳಲ್ಲಿ ಜನ ವಸತಿ ಇಲ್ಲ. ಭಾರತದ ರಕ್ಷಣೆಯ ದೃಷ್ಟಿಯಿಂದ ಈ ದ್ವೀಪ ಸಮೂಹ ಅತ್ಯಂತ ಮಹತ್ವ ಪಡೆದುಕೊಂಡಿದೆ.
ಭಾರತದ ಮೂರು ಪಡೆಗಳ ಸಂಯುಕ್ತ ಕೇಂದ್ರ ಅಂಡಮಾನ್ ನಲ್ಲಿ ಕಾರ್ಯಾಚರಿಸುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.