



ಉಡುಪಿ, :: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಇಬ್ಬರು ಮಕ್ಕಳು ನರ್ಸರಿ, ಎಲ್.ಕೆ.ಜಿ ಮತ್ತು ಯು.ಕೆ.ಜಿ ಓದುತ್ತಿದ್ದಲ್ಲಿ, ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಸೇವಾಸಿಂಧು ತಂತ್ರಾAಶದಲ್ಲಿ ಮಾರ್ಚ್ 31 ರ ವರೆಗೆ, ತಂದೆ ಮತ್ತು ತಾಯಿಯವರ ಆಧಾರ್ ಸಂಖ್ಯೆ, ಮಗುವಿನ ಆಧಾರ್ ಸಂಖ್ಯೆ ಹಾಗೂ ಮಗು ಶಾಲೆಗೆ ದಾಖಲಾಗಿರುವ ವಿವರ (ಶಾಲೆಗೆ ದಾಖಲಾದ ಪ್ರವೇಶ ಶುಲ್ಕ ರಶೀದಿ ಅಪ್ಲೋಡ್ ಮಾಡುವುದು)ಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮೇಲ್ಕಂಡ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿದ್ದಲ್ಲಿ, ಸಹಾಯಧನ ಪಡೆಯಬಹುದಾಗಿದ್ದು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ 1 ನೇ ತರಗತಿಯಿಂದ ಉನ್ನತ ಶಿಕ್ಷಣದ, ಶೈಕ್ಷಣಿಕ ಸಹಾಯಧನ ಪಡೆಯಲು ಎಸ್.ಎಸ್.ಪಿ ಪೋರ್ಟ್ಲ್ನಲ್ಲಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.