



ಬೆಂಗಳೂರು: : ಕರ್ನಾಟಕದ 7 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.
ಜೂನ್ 3 ರಂದು ಚುನಾವಣೆ ನಡೆಯಲಿದೆ. ಮೇ 17ಕ್ಕೆ ಅಧಿಸೂಚನೆ ಪ್ರಕಟವಾಗಲಿದ್ದು, ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎಂದು ತಿಳಿದು ಬಂದಿದೆ.
ಬಿಜೆಪಿಯ ಲಕ್ಷಣ ಸವದಿ, ಲೆಹರ್ ಸಿಂಗ್ ಕಾಂಗ್ರೆಸ್‌ನ ಆರ್.ಬಿ. ತಿಮ್ಮಾಪೂರ್, ಅಲ್ಲಂ ವೀರಭದ್ರಪ್ಪ , ವೀಣಾ ಅಚ್ಚಯ್ಯ ಮತ್ತು ಜೆಡಿಎಸ್‌ನ ರಮೇಶ್ ಗೌಡ, ನಾರಾಯಣ ಸ್ವಾಮಿ ಅವರ ಅವಧಿ ಜೂನ್ 14ಕ್ಕೆ ಕೊನೆಯಾಗಲಿದೆ. ಇನ್ನು ಈ ಚುನಾವಣೆಯಲ್ಲಿ ಬಿಜೆಪಿಯ 4, ಕಾಂಗ್ರೆಸ್‌ನ 2, ಜೆಡಿಎಸ್‌ನ ಒಬ್ಬರು ಸದಸ್ಯರು ಆಯ್ಕೆಯಾಗುವ ಸಾಧ್ಯತೆಯಿದೆ. ವಿಧಾನಸಭೆಯ 225 ಸದಸ್ಯರು ಮತದಾನ ಮಾಡಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.