



ಉಡುಪಿ : ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜುಲೈ 11 ಮತ್ತು 13 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
110/33/11 ಕೆ.ವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಪೆರ್ಡೂರು ಫೀಡರ್ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಪುತ್ತಿಗೆ, ಪಕ್ಕಾಲು, ಪೆರ್ಡೂರು ಪೇಟೆ, ಮುತ್ತೂರ್ಮೆ, ಕುಕ್ಕೆಹಳ್ಳಿ, ಪಾಡಿಗಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 11 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಚೇರ್ಕಾಡಿ, ಕೊಕ್ಕರ್ಣೆ ಫೀಡರ್ ಮಾರ್ಗದಲ್ಲಿ ಹಾಗೂ 110/11ಕೆ.ವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆ.ವಿ ಕಲ್ಯಾಣಪುರ ಮತ್ತು ಶಾಂತಿವನ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾಮಂದಿರ, ಕೆ.ಕೆ.ಪಾರ್ಮ್ಸ್, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಅಂಬಾಗಿಲು, ಪೆರಂಪಳ್ಳಿ, ಪುತ್ತೂರು, ಗೋಪಾಲಪುರ, ಶಾಂತಿವನ, ಬಡಾನಿಡಿಯೂರು, ಗರಡಿಮಜಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 11 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕಾಪು ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಾಗೂ ಟ್ರಾನ್ಸ್ಫಾರ್ಮರ್ ಸ್ಟ್ರಕ್ಚರ್ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರರಿಂದ ಉಚ್ಚಿಲ, ಇನ್ನಂಜೆ, ಕಲ್ಯ, ಕಾಪು, ಮೂಳೂರು, ಪೊಲಿಪು, ಕೊಪ್ಪಲಂಗಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 11 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ನ ಬ್ಯಾಂಕ್-1 ನಲ್ಲಿ ಕೇಬಲ್ ಕಟ್ ಮಾಡಿ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರ್ವ ಎಂ.ಯು.ಎಸ್.ಎಸ್ ನ ಬ್ಯಾಂಕ್-1 ರಿಂದ ಹೊರಡುವ 11 ಕೆವಿ ಬಂಟಕಲ್ಲು, ಶಿರ್ವ ಹಾಗೂ ಮುದರಂಗಡಿ ಫೀಡರ್ ಮಾರ್ಗದಲ್ಲಿ ಉಳಿಯಾರಗೋಳಿ ಗ್ರಾಮ, ಬಂಟಕಲ್ಲು ಗ್ರಾಮ, ಮೂಡಬೆಟ್ಟು ಗ್ರಾಮ, ಪಾಂಗಳ ಗ್ರಾಮ, ಶಿರ್ವ ಗ್ರಾಮ, ಮಟ್ಟಾರು ಗ್ರಾಮ, ಪದವು ಪಾಂಬೂರು, ಪಂಜಿಮಾರು, ಪಿಲಾರುಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು ಗ್ರಾಮ, ಚಂದ್ರನಗರ, ಮಲ್ಲಾರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 13 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.