



ಕಾರ್ಕಳ : ಬಹುಕಾಲದಿಂದ ರಾಜ್ಯದಲ್ಲಿ ಇದ್ದ ಅತಿಥಿ ಉಪನ್ಯಾಸಕರ ಬೇಡಿಕೆಯನ್ನು ಅತ್ಯಂತ ಪಾರದರ್ಶಕವಾಗಿ ಈಡೇರಿಸಿದ್ದೇವೆ.
ಎಲ್ಲರಿಗೂ ನ್ಯಾಯ ಒದಗಿಸಿದ್ದೇವೆ. ಮುಂದೆ ಉಪನ್ಯಾಸಕರ ನೇಮಕಾತಿ ನಡೆಯಲಿದ್ದು ಆಸಕ್ತರು ಆರ್ಹತೆಯನುಸಾರ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಅತಿಥಿ ಉಪನ್ಯಾಸಕರಿಗೆ ಅತೀ ಕಡಿಮೆ ಗೌರವಧನ ಇತ್ತು ಈಗ ಸುಮಾರು ೩೨ ಸಾವಿರದಷ್ಡು ನೀಡಿ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಎನ್ ಐಸಿ ಮಾರ್ಗಸೂಚಿ ವ್ಯವಸ್ಥೆಯ ಪ್ರಕಾರ ಅತ್ಯುತ್ತಮವಾಗಿ ನಿರ್ವಹಿಸಿದ ಹೆಮ್ಮೆ ಇದೆ ಎಂದರು.
ಉಕ್ರೇನ್ ನಲ್ಲಿ ಮೃತರಾದ ನವೀನ್ ಮೃತದೇಹವನ್ನು ರಾಜ್ಯಕ್ಕೆ ತರಲು ಎಲ್ಲಾ ರೀತಿಯ ಪ್ರಯತ್ನದಲ್ಲಿ ಸರ್ಕಾರ ಇದೆ. ನವೀನ್ ಕುಟುಂಬದ ಜೊತೆಗೆ ಸರ್ಕಾರ ಇದೆ. ಬೇರೆ ದೇಶಕ್ಕೆ ಹೊಲಿಸಿದರೆ ಭಾರತದ ಪ್ರಜೆಗಳನ್ನು ಸ್ವದೇಶಕ್ಕೆ ಕರೆ ತರುವಲ್ಲಿ ನಾವು ಮುಂಚೂಣಿಯಲ್ಲಿ ಇದ್ದೇವೆ.
೧೯೬೦೦ ಭಾರತೀಯ ಪ್ರಜೆಗಳನ್ನು ಭಾರತಕ್ಕೆ ಕರೆತರಲು ನರೇಂದ್ರ ಮೋದಿ ನೇತ್ರತ್ವದಲ್ಲಿ ವಿಶೇಷ ಪ್ರಯತ್ನ ಮಾಡಲಾಗುತ್ತಿದೆ. ಮೋದಿಯವರ ಮಾರ್ಗದರ್ಶನದಲ್ಲಿ ಕಾರ್ಯ ಸಾಧನೆ ನಮಗೆಲ್ಲ ಹೆಮ್ಮೆ ಎಂದು ಅಶ್ವತ್ ನಾರಾಯಣ ಹೇಳಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.