



ಚೆನ್ನೈ: ತಾಂತ್ರಿಕ ದೋಷದಿಂದಾಗಿ ಸಂಭವಿಸಬೇಕಾಗಿದ್ದ ಭಾರಿ ವಿಮಾನ ದುರಂತವೊಂದು ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಘಟನೆ ಚೆನ್ನೈ ನಲ್ಲಿ ನಡೆದಿದೆ.
ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 105 ಪ್ರಯಾಣಿಕರು ಮತ್ತು 7 ಸಿಬ್ಬಂದಿಯೊಂದಿಗೆ ದುಬೈಗೆ ಹೊರಟಿದ್ದ ವಿಮಾನ ಆಕಾಶದಲ್ಲಿ ಹಾರಾಟ ನಡೆಸುತ್ತಿದ್ದಾಗ ತಾಂತ್ರಿಕ ದೋಷವಿರುವುದು ಪೈಲಟ್‌ಗೆ ತಿಳಿದಿದೆ. ಕೂಡಲೇ ಅವರು ಚೆನ್ನೈ ವಿಮಾನ ನಿಲ್ದಾಣದ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಿ ತುರ್ತಾಗಿ ಇಳಿಯಲು ಅನುಮತಿ ಕೋರಿದರು . ಹೀಗಾಗಿ ವಿಮಾನ ಟೇಕ್ ಆಫ್ ಆದ 20 ನಿಮಿಷದಲ್ಲಿ ಮತ್ತೆ ಚೆನ್ನೈ ಏರ್ ಪೋರ್ಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿತು .
ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆದ ಕೂಡಲೇ ಫೈಟ್ ಇಂಜಿನಿಯರ್ ತಜ್ಞರು ತಾಂತ್ರಿಕ ದೋಷ ಸರಿಪಡಿಸಲು ಯತ್ನಿಸಿದರು. ಸುಮಾರು ಒಂದು ಗಂಟೆಗಳ ಕಾಲ ವಿಮಾನದ ಸಮಸ್ಯೆಯನ್ನು ಸರಿಪಡಿಸಲು ಕಾಲಾವಕಾಶ ತೆಗೆದುಕೊಂಡರು. ವಿಮಾನ ಸುಮಾರು ಒಂದೂವರೆ ಗಂಟೆ ತಡವಾಗಿ ದುಬೈಗೆ ಹೊರಟಿತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.