logo
WhatsApp Image 2026-04-02 at 14.46.04.jpeg
hindalco everlast.jpeg

ಎನ್ನೆಸ್ಸೆಸ್ : ಸುರತ್ಕಲ್ ನ ಬಿಂದಿಯಾ ಶೆಟ್ಟಿ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ,; 24ರಂದು ರಾಷ್ಟ್ರಪತಿ ಪ್ರದಾನ

ಟ್ರೆಂಡಿಂಗ್
share whatsappshare facebookshare telegram
17 Sept 2021
post image

ಸುರತ್ಕಲ್() : ರಾಷ್ಟ್ರೀಯ ಸೇವಾ ಯೋಜನೆಯಡಿಯಲ್ಲಿ ನೀಡುವ ಅತ್ಯತ್ತಮ ಪ್ರತಿಭಾನ್ವಿತರಿಗೆ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ  ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಬಿಕಾಂ ಅಂತಿಮ ವರ್ಷದ  ವಿದ್ಯಾರ್ಥಿನಿ 

ಬಿಂದಿಯಾ ಎಲ್. ಶೆಟ್ಟಿ ಆಯ್ಕೆಯಾಗಿದ್ದಾರೆ.   

ಸೆ. 24 ರಂದು ನವದೆಹಲಿಯಲ್ಲಿ ರಾಷ್ಟ್ರಪತಿಯವರಿಂದ  ಬಿಂದಿಯಾ ಶೆಟ್ಟಿ 

ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ತು ಸುಜಾತ ಶೆಟ್ಟಿ ದಂಪತಿ ಪುತ್ರಿ. 

ಈಕೆ ಎಸ್ ಎಸ್ ಎಲ್ ಸಿಯಲ್ಲಿ ಹಾಗೂ ಪಿಯುಸಿಯಲ್ಲಿ ರಾಜ್ಯದಲ್ಲೇ ಐದನೇ ಸ್ಥಾನ ಪಡೆದಿದ್ದರು. ಸದ್ಯ ಸಿಎ ವ್ಯಾಸಂಗವನ್ನೂ ಮಾಡುತ್ತಿರುವ ಬಿಂದಿಯಾ ಶೆಟ್ಟಿ ಅನೇಕ ಸಂಘಸಂಸ್ಥೆಗಳಿಂದಲೂ  ಪ್ರಶಸ್ತಿ ಗೌರವಗಳನ್ನು ಪಡೆದಿದ್ದರು.

ಈಕೆ 2019 ರಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.