



ಉಡುಪಿ, ಜ.20: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 50 ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಪ್ರತಿಷ್ಠಿತ ಐ.ಐ.ಎಂ ಬೆಂಗಳೂರು ಇವರ ಮೂಲಕ ಉದ್ಯಮಶೀಲತಾ ತರಬೇತಿ ಪಡೆಯಲು 21 ರಿಂದ 45 ವರ್ಷದೊಳಗಿನ ಮಹಿಳಾ ಪದವೀಧರರಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 9482300400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.