

ಬೆಂಗಳೂರು:ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಾಯುಕ್ತದಿಂದ ಸಿಹಿ ಸುದ್ದಿ ಸಿಕ್ಕಿದೆ. ಖಾಲಿ ಇರುವ ಗ್ರೂಪ್-ಸಿ 'ಕ್ಲರ್ಕ್-ಕಮ್-ಟೈಪಿಸ್ಟ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ನೇರ ನೇಮಕಾತಿ ನಡೆಸಲಾಗುತ್ತಿದೆ.
ಹುದ್ದೆಗಳ ವಿವರ
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಜೂನಿಯರ್ ಗ್ರೇಡ್ ಟೈಪಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಈ ನೇಮಕಾತಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳು ಹಾಗೂ ಟೈಪಿಂಗ್ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹34,100 ರಿಂದ ₹67,600 ವೇತನ ಶ್ರೇಣಿ ದೊರೆಯಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.