



ಬೆಂಗಳೂರು, ಮಾರ್ಚ್ 14: ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಶುರುವಿಟ್ಟುಕೊಂಡಿದೆ. ನಿತ್ಯ ಕೆಲವು ಜಿಲ್ಲೆಗಳಲ್ಲಿ ದರ್ಶನ ನೀಡುತ್ತಿದ್ದ ಮಳೆರಾಯ ಬಿಡುವು ನೀಡುವ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ವೈಪರಿತ್ಯದಿಂದಾಗಿ ಕರ್ನಾಟಕದ ಅರ್ಧ ಭಾಗಕ್ಕೆ ಬೇಸಿಗೆ, ಇನ್ನರ್ಧ ಭಾಗಕ್ಕೆ ಮಳೆಗಾಲದ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಮಾರ್ಚ್ 16ರಿಂದ 5 ದಿನಗಳ ಕಾಲ ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಜೋರು ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕೆಲವೆಡೆ ಈಗಾಗಲೇ ಮೂರು ದಿನಗಳಿಂದ ಗುಡುಗು ಸಹಿತ ಮಳೆ ಆಗಿದೆ. ಸಂಜೆ ನಂತರ ಬರುವ ಮಳೆ ಬೇಸಿಗೆ ಧಗೆ ಕಡಿಮೆ ಮಾಡಿದೆ. ಮುಂದಿನ ವಾರವು ಪೂರ್ವ ಮುಂಗಾರು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣದಿಂದ ಉತ್ತಮವಾಗಿ ಸುರಿಯುವ ಸಾಧ್ಯತೆ ಇದೆ. ಈ ಭಾಗದಲ್ಲಿ ಮಳೆಗಾಲ ವಾತವರಣ ನಿರ್ಮಾಣವಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.