



ಟೋಕಿಯೋ: ಜಪಾನ್ ಪ್ರಧಾನಿ ಫ್ಯೂಮಿಯೋ ಕಿಶಿಡಾ ಅವರು ಭಾಷಣ ಮಾಡುತ್ತಿದ್ದ ವೇಳೆ ಹತ್ತಿರದಲ್ಲೇ ಸ್ಫೋಟ ಸಂಭವಿಸಿರುವುದಾಗಿ ವರದಿಯಾಗಿದೆ. ಪಶ್ಚಿಮ ಜಪಾನ್‌ನ ವಕಯಾಮಾದಲ್ಲಿ ಕಿಶಿಡಾ ಭಾಷಣ ಮಾಡುತ್ತಿದ್ದರು. ಈ ವೇಳೆ ಪ್ರಧಾನಿಯೆಡೆಗೆ ಸ್ಫೋಟಕ ವಸ್ತುವನ್ನು ಎಸೆಯಲಾಗಿದೆ ಎಂದು ವರದಿಗಳು ತಿಳಿಸಿವೆ. ತಕ್ಷಣವೇ ಕಿಶಿಡಾ ಅವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಲು ಪೊಲೀಸರು ನಿರಾಕರಿಸಿದ್ದಾರೆ. ಸ್ಥಳೀಯ ಮಾಧ್ಯಮಗಳ ಪ್ರಕಾರ ಪ್ರಧಾನಿ ಭಾಷಣ ಮಾಡುತ್ತಿದ್ದ ವೇಳೆ ಅನುಮಾನಾಸ್ಪದ ವಸ್ತುವನ್ನು ಅವರೆಡೆಗೆ ಎಸೆಯಲಾಗಿದೆ. ಈ ವೇಳೆ ಸ್ಥಳದಲ್ಲಿ ಹೊಗೆ ಕಾಣಿಸಿಕೊಂಡಿದೆ. ಸದ್ಯ ಘಟನಾ ಸ್ಥಳದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಅಧಿಕಾರಿಗಳು ಸ್ಥಳದಲ್ಲಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಕಳೆದ ವರ್ಷ ಜುಲೈನಲ್ಲಿ ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರು ಪ್ರಚಾರ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದಾಗ ಅವರ ಮೇಲೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದ. ಮಾಜಿ ಪ್ರಧಾನಿ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಶಿಂಜೋ ಅಬೆ ಹತ್ಯೆಯ ಬಳಿಕ ಜಪಾನ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.