logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಜೂ.30ರವರೆಗೆ ‘ಪ್ಯಾನ್-ಆಧಾರ್’ ಲಿಂಕ್ ಗಡುವು ವಿಸ್ತರಣೆ

ಟ್ರೆಂಡಿಂಗ್
share whatsappshare facebookshare telegram
28 Mar 2023
post image

ನವದೆಹಲಿ: ಪ್ಯಾನ್ ಹಾಗೂ ಆಧಾರ್ ಕಾರ್ಡ್​ ಲಿಂಕ್ ಮಾಡಲು ಗಡುವು ಮುಗಿಯುವ ಎರಡು ದಿನಗಳ ಮುಂಚೆಯೇ ಕೇಂದ್ರ ಸರ್ಕಾರ ಗಡುವನ್ನು ವಿಸ್ತರಣೆ ಮಾಡಿದೆ. ಈ ಹಿಂದೆ ಮಾರ್ಚ್​ 31 ಕೊನೆಯ ದಿನಾಂಕವೆಂದು ಹೇಳಲಾಗಿತ್ತು. ಆದರೆ ಇದೀಗ ಜೂನ್ 30ರವರೆಗೂ ಗಡುವು ವಿಸ್ತರಿಸಲಾಗಿದೆ.

ಪರ್ಮನೆಂಟ್‌ ಅಕೌಂಟ್‌ ನಂಬರ್‌ ಅಂದರೆ PAN ಕಾರ್ಡ್ ಅತ್ಯಂತ ಪ್ರಮುಖ ಬ್ಯುಸಿನೆಸ್‌ ID ಆಗಿದ್ದು, ಪ್ಯಾನ್‌ ನಂಬರ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸವನ್ನು ಸುಲಭವಾಗಿ ನಿಭಾಯಿಸಲು ಸಾಧ್ಯವಿಲ್ಲ.

ಬ್ಯಾಂಕಿನಲ್ಲಿ ಖಾತೆ ತೆರೆಯುವುದರಿಂದ ಹಿಡಿದು ಹೂಡಿಕೆ ಮಾಡುವವರೆಗೆ ಎಲ್ಲ ಕೆಲಸಗಳಿಗೂ ಪ್ಯಾನ್ ಕಾರ್ಡ್ ಬೇಕೇ ಬೇಕು. ಆ ಪರಿಸ್ಥಿತಿಯಲ್ಲಿ ಪ್ಯಾನ್ ಕಾರ್ಡ್‌ ಇಲ್ಲದಿದ್ದರೆ ನಿಮ್ಮ ಅನೇಕ ಹಣಕಾಸು ಕೆಲಸಗಳು ಸ್ಥಗಿತವಾಗಬಹುದು. ನೀವು ಇನ್ನೂ ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡದಿದ್ದರೆ, ಮುಂದೆ ದೊಡ್ಡ ಸಮಸ್ಯೆ ಎದುರಿಸಬೇಕಾಗಬಹುದು.ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ಗಡುವು ಹತ್ತಿರ ಬಂದಿತ್ತು, ಈ ಹಿಂದೆ ಮಾರ್ಚ್​ 31 ಕೊನೆಯ ದಿನಾಂಕವೆಂದು ಹೇಳಲಾಗಿತ್ತು. ಆದರೆ ಇದೀಗ ಜೂನ್ 30ರವರೆಗೂ ಗಡುವು ವಿಸ್ತರಿಸಲಾಗಿದೆ.

ಆಧಾರ್, ಪಾನ್ ಕಾರ್ಡ್ ಲಿಂಕ್ ಮಾಡಿಸಲು ಸೈಬರ್​ ಸೆಂಟರ್​ಗಳಲ್ಲಿ ಜನ ಮುಗಿಬಿದ್ದಿದ್ದಾರೆ. ಫೈನ್ ಕಟ್ಟುವ ಭೀತಿಯಲ್ಲಿ ಕ್ಯೂನಲ್ಲಿ ನಿಂತು ಲಿಂಕ್​​ ಮಾಡಿಸುತ್ತಿದ್ದಾರೆ, ಇದನ್ನೇ ಕೆಲ ಸೈಬರ್ ಸೆಂಟರ್​ಗಳು ಬಂಡವಾಳ‌ ಮಾಡಿಕೊಂಡಿವೆ. ಬೇರೆ ಬೇರೆ ವೆಬ್​ಸೈಟ್​ಗಳಲ್ಲಿ ಪಾನ್ ಹಾಗೂ ಆಧಾರ್ ಲಿಂಕ್‌‌ ಮಾಡುತ್ತಿದ್ದಾರೆ. 1 ಸಾವಿರ ಶುಲ್ಕದ ಜೊತೆಗೆ ಸೈಬರ್ ಸೆಂಟರ್ ಮಾಲೀಕರು ಜೊತೆಗೆ ಪ್ರೊಸೆಸಿಂಗ್ ಶುಲ್ಕ ಎಂದು 500 ರೂಪಾಯಿ ಹೆಚ್ಚುವರಿ ವಸೂಲಿ ಮಾಡಲಾಗುತ್ತಿದೆ. ಪ್ಯಾನ್ ಅನ್ನು ಆಧಾರ್‌ಗೆ ಲಿಂಕ್ ಮಾಡಲಾಗಿದೆಯೇ ಎಂದು ಪರಿಶೀಲಿಸಲು ಇಲಾಖೆಯು ತೆರಿಗೆದಾರರಿಗೆ ತನ್ನ ವೆಬ್‌ಸೈಟ್‌ನಲ್ಲಿ ಲಿಂಕ್‌ಗಳನ್ನು ನೀಡಿದೆ.

ಪ್ಯಾನ್ ಅನ್ನು ಆಧಾರ್‌ಗೆ ಲಿಂಕ್ ಮಾಡಲಾಗಿದೆಯೇ ಅಥವಾ ಇಲ್ಲವೇ ಪರಿಶೀಲಿಸುವುದು ಹೇಗೆ?

ಆಧಾಯ ತೆರಿಗೆ ಇಲಾಖೆ ಇ-ಪೋರ್ಟಲ್‌ಗೆ ಭೇಟಿ ನೀಡಿ https://www.incometax.gov.in/iec/foportal/ ಎಡ ಭಾಗದಲ್ಲಿ ಕಾಣುವ Quick Linksನಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ. ನಿಮ್ಮ 10 ಡಿಜಿಟ್‌ನ ಪ್ಯಾನ್ ಸಂಖ್ಯೆಯನ್ನು ನಮೂದಿಸಿ ನಿಮ್ಮ 12 ಡಿಜಿಟ್‌ನ ಆಧಾರ್ ಸಂಖ್ಯೆಯನ್ನು ನಮೂದಿಸಿ View Link Aadhaar Status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪ್ಯಾನ್ ಆಧಾರ್ ಲಿಂಕ್ ಆಗಿದೆಯೇ ಎಂದು ತಿಳಿಯಲಿದೆ. ಎಡಬದಿಯಲ್ಲಿ Quick Liks ಕಾಣಿಸುತ್ತದೆ. ಅಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ ನಿಮ್ಮ ಪಾನ್ ಮತ್ತು ಆಧಾರ್ ನಂಬರ್ ಅನ್ನು ನಮೂದಿಸಿ, ಬಳಿಕ View Link Aadhaar Status ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಮತ್ತು ಪಾನ್ ಜೋಡಣೆ ಆಗಿದ್ದರೆ, “Your PAN is already linked to given Aadhaar” (ನಿಮ್ಮ ಪಾನ್ ಈಗಾಗಲೇ ಈ ಆಧಾರ್ ಜೊತೆ ಲಿಂಕ್ ಆಗಿದೆ) ಎಂಬಂತಹ ಸಂದೇಶ ಬರುತ್ತದೆ. ಇನ್ನು, ಇನ್ಕಮ್ ಟ್ಯಾಕ್ಸ್ ಇ ಫೈಲಿಂಗ್ ಪೋರ್ಟಲ್​ಗೆ https://incometaxindiaefiling.gov.in/ ಹೋಗಿ ಅಲ್ಲಿ ನೀವು ಲಾಗಿನ್ ಆಗಬೇಕು. ಅಲ್ಲಿ ಲಿಂಕ್ ಆಧಾರ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ ಪರಿಶೀಲನೆ ನಡೆಸಬಹುದು. ಪಾನ್ ಜೊತೆ ನಿಮ್ಮ ಆಧಾರ್ ಲಿಂಕ್ ಅಗಿದ್ದರೆ ಆಧಾರ್ ನಂಬರ್ ಕಾಣುತ್ತದೆ. ಇಲ್ಲದಿದ್ದರೆ ಲಿಂಕ್ ಆಧಾರ್ ಸ್ಟೇಟಸ್ ಕಾಣುತ್ತದೆ. ನೀವು ಆಧಾರ್ ಮತ್ತು ಪಾನ್ ಲಿಂಕ್ ಮಾಡಬೇಕಾಗುತ್ತದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.