



ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ , ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ದ.ಕ ಜಿಲ್ಲಾಡಳಿತ ವಿಸ್ತರಣೆ ಮಾಡಿದೆ.ಮಂಗಳೂರು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ನಾಳೆ ಮಧ್ಯಾಹ್ನ 2 ಗಂಟೆಯವರೆಗೂ ವಿಸ್ತರಿಸಲಾಗಿದೆ
ದ.ಕ ತಾಲೂಕುಗಳಾದ , ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳ ಹಾಗೂ ಬೆಳ್ಳಾರೆ144 ಸೆಕ್ಷನ್ ಜಾರಿಗೊಳಿಸಲಾಗಿದ್ದು, 5ಕ್ಕಿಂತ ಹೆಚ್ಚು ಜನ ಒಂದೆಡೆ ಸೇರದಂತೆ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ.
ಶಂಕಿತರು ವಶಕ್ಕೆ: ಸುಮಾರು 21 ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದು . ಈ ಪೈಕಿ ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆಗೆ ಸೇರಿದವರೂ .ಎನ್ನಲಾಗಿದೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುಲೈ29 ರಂದು ಭೇಟಿ ನೀಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ
ಇಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ , ನೆಟ್ಟಾರು ಮೃತ ಪ್ರವೀಣ್ ನಿವಾಸಕ್ಕೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.
ಪ್ರವೀಣ್ ತಂದೆ ಅಸ್ವಸ್ಥ: ಪುತ್ರನನ್ನು ಕಳೆದುಕೊಂಡ ದುಃಖದ ನಡುವೆ ಪ್ರವೀಣ್ ರವರ ತಂದೆಗೆ ಹೃದಯ ಬಡಿತದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥರಾಗಿದ್ದಾರೆ ,ಅಂಬ್ಯುಲೆನ್ಸ್ ಮೂಲಕ ಬೆಳ್ಳಾರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.