logo
WhatsApp Image 2026-04-02 at 14.46.04.jpeg
hindalco everlast.jpeg

ವಾಯುಭಾರ ಕುಸಿತ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

ಟ್ರೆಂಡಿಂಗ್
share whatsappshare facebookshare telegram
7 Jun 2023
post image

ಉಡುಪಿ, ಜೂನ್ 6: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಹಾಗೂ ಮಳೆಯಾಗುವ ಸಾಧ್ಯತೆ ಇರುತ್ತದೆ.

ಈ ಸಂದರ್ಭದಲ್ಲಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರ ಹಾಗೂ ನದಿ ತೀರ ಪ್ರದೇಶಗಳಲ್ಲಿ ಇಳಿಯಬಾರದು.

ಮಕ್ಕಳು ಮತ್ತು ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ ಹಾಗೂ ಮರಗಳ ಕೆಳಗೆ ನಿಲ್ಲಬಾರದು. ನೆರೆ ಪೀಡಿತ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು.

ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ 24*7 ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಉಚಿತ ಸಹಾಯವಾಣಿ ಸಂಖ್ಯೆ 1077 ಅಥವಾ 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.