logo
WhatsApp Image 2026-04-02 at 14.46.04.jpeg
hindalco everlast.jpeg

ಕುಟುಂಬ ಕಲಹ: ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ರಾಜ್ಯ
share whatsappshare facebookshare telegram
2 Mar 2023
post image

ಬೆಂಗಳೂರು: ದಾಂಪತ್ಯ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಬೆಂಗಳೂರಿನ ಕೋಣನಕುಂಟೆಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿರುವ ನಾಗೇಂದ್ರ, ತನ್ನ ಪತ್ನಿ ವಿಜಯ(28) ಮತ್ತು ಮಕ್ಕಳಾದ ನಿಷಾ(7) ಹಾಗೂ ದೀಕ್ಷಾ(5) ಅವರನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆರೋಪಿ ನಾಗೇಂದ್ರ ಊಟದಲ್ಲಿ ತಿಗಣೆ ಹಾಗೂ ಇಲಿ ಔಷಧ ಬೆರೆಸಿ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ತಿನ್ನಿಸಿದ್ದಾನೆ. ಬಳಿಕ ತಾನೂ ಅದನ್ನು ಸೇವಿಸಿದ್ದಾನೆ. ಆದರೆ ನಾಗೇಂದ್ರ ಬದುಕುಳಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಣನಕುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.