logo
WhatsApp Image 2026-04-02 at 14.46.04.jpeg
hindalco everlast.jpeg

ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣ ನಿಧನ..!

ಟ್ರೆಂಡಿಂಗ್
share whatsappshare facebookshare telegram
11 Jul 2024
post image

ಬೆಂಗಳೂರು, ಜು.11: ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಇಂದು ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.

1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದ ಅಪರ್ಣಾ ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಸಿ ಸೈ ಎನಿಸಿಕೊಂಡಿದ್ದಾರೆ. ಸಿನಿಮಾಗಿಂತ ನಿರೂಪಕಿಯಾಗಿ ಅಪರ್ಣಾ ಎಲ್ಲರ ಮನಗೆದ್ದಿದ್ದರು. ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡುವ ಮೂಲಕ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು.

ಇವರು 90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಕಾರ್ಯಕ್ರಮದ ನಿರೂಪಣೆ, ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998 ರಲ್ಲಿ ನೆಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದ ಅಪರ್ಣಾ ರಿಯಾಲಿಟಿ ಶೋಗಳಲ್ಲೂ ಸೈ ಎನಿಸಿಕೊಂಡಿದ್ರು. ಇನ್ನು 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್' ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಹಾಸ್ಯ ನಟಿಯಾಗಿಯೂ ಜನರ ಮನಗೆದ್ದಿದ್ದರು.

ಬಹುಮುಖ ಪ್ರತಿಭೆಯ ಅಪರ್ಣಾ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಅಂಕಣ ಬರೆಯುವ ಮೂಲಕ ಓದುಗರಿಗೂ ಹತ್ತಿರವಾಗಿದ್ದರು. ಅಪರ್ಣಾ ತಂದೆ ಕನ್ನಡ ಪ್ರಭ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿದ್ದರು. ಮೊದಲ ಮದುವೆಯಿಂದ ವಿಚ್ಚೇದನ ಪಡೆದಿದ್ದ ಅಪರ್ಣಾ, ಖ್ಯಾತ ಲೇಖಕ ನಾಗರಾಜ ವಸ್ತಾರೆ ವರಿಸಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.