



ಮುಂಬೈ: ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬ್ರಿಟನ್ ದೇಶದ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಅವರಿಗೆ ಮೆದುಳಿನಲ್ಲಿ ರಕ್ತಸ್ರಾವವಾಗಿದ್ದು, ಉಳಿದುಕೊಂಡಿದ್ದ ಹೋಟೆಲ್ ನಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದರು ಎಂದು ಹೇಳಲಾಗುತ್ತಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ರಾತ್ರಿಯೇ ಬಳಲಿದಂತೆ ಕಂಡು ಬಂದಿದ್ದ ಅವರು, ತೀವ್ರ ಕುತ್ತಿಗೆ ನೋವಿನ ಬಗ್ಗೆಯೂ ಮಾತನಾಡಿದ್ದರು ಎಂದು ಆಪ್ತರು ತಿಳಿಸಿದ್ದಾರೆ.
ಆಪ್ತ ಮೂಲಗಳ ಪ್ರಕಾರ ಬಾಂಬೆ ಜಯಶ್ರೀ ಅವರು ಶಸ್ತ್ರಚಿಕಿತ್ಸೆಗೆ ಒಳಲಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ಸಿಯಾಗಿ ನೆರವೇರಿದೆ ಎಂದು ಹೇಳಲಾಗುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.