logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಖ್ಯಾತ ಹಿರಿಯ ನಟ ಶರತ್ ಬಾಬು ನಿಧನ

ಟ್ರೆಂಡಿಂಗ್
share whatsappshare facebookshare telegram
22 May 2023
post image

ಖ್ಯಾತ ಹಿರಿಯ ನಟ ಶರತ್ ಬಾಬು ಬಹು ಅಂಗಾಂಗ ವೈಫಲ್ಯದಿಂದ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಮೇ.22ರಂದು ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.

ಶರತ್ ಬಾಬು ಅವರನ್ನು ಏಪ್ರಿಲ್​ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ತುಸು ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್​ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಏಪ್ರಿಲ್ 20 ರ ಸುಮಾರಿಗೆ ಹೈದರಾಬಾದ್​ನ ಗಚ್ಚಿಬೌಲಿಯ ಎಐಜಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಐಸಿಯು ವಾರ್ಡ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ವೈದ್ಯರ ಸತತ ಪ್ರಯತ್ನಗಳು ಫಲನೀಡದೆ ಶರತ್ ಬಾಬು ಇಹಲೋಕ ತ್ಯಜಿಸಿದ್ದಾರೆ.

ಇವರು ಕನ್ನಡದ ಅಮೃತವರ್ಷಿಣಿ  ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆಯನ್ನು ಪಡೆದುಕೊಂಡಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.