logo
WhatsApp Image 2026-04-02 at 14.46.04.jpeg
hindalco everlast.jpeg

ನಟಿ ರಚಿತಾರಾಮ್ ಹೆಗಲಿಗೆ ಕೈಹಾಕಿ ಹುಚ್ಚಾಟವಾಡಿದ ಅಭಿಮಾನಿ: ಪೊಲೀಶ್ ವಶಕ್ಕೆ

ಟ್ರೆಂಡಿಂಗ್
share whatsappshare facebookshare telegram
20 Oct 2026
post image

ತುಮಕೂರು: ತುಮಕೂರು ದಸರಾ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್ ನಟಿ ರಚಿತಾ ರಾಮ್ ಅವರಿಗೆ ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ವೇದಿಕೆಗೆ ಬಂದ ವ್ಯಕ್ತಿ, ಅವರ ಹೆಗಲ ಮೇಲೆ ಕೈ ಹಾಕಿ ಎಳೆದಾಡಲು ಯತ್ನಿಸಿದ್ದು, ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ರಾತ್ರಿ ಆಯೋಜಿಸಲಾಗಿದ್ದ ದಸರಾ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟಿ ರಚಿತಾ ರಾಮ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜಾ ಅವರೊಂದಿಗೆ ರ‍್ಯಾಂಪ್ ವಾಕ್ ಮಾಡುತ್ತಿದ್ದರು.

ಅಭಿಮಾನಿಗಳ ನಡುವೆ ನಿರ್ಮಿಸಲಾಗಿದ್ದ ರ‍್ಯಾಂಪ್‌ನಲ್ಲಿ ನಟಿ ಹೆಜ್ಜೆ ಹಾಕುತ್ತಿದ್ದಾಗ ವ್ಯಕ್ತಿಯೊಬ್ಬ ಏಕಾಏಕಿ ವೇದಿಕೆಗೆ ಬಂದಿದ್ದಾನೆ. ರಚಿತಾ ರಾಮ್ ಅವರ ಹೆಗಲ ಮೇಲೆ ಕೈ ಹಾಕಿ ಮೊಬೈಲ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ನಟಿಯನ್ನು ಎಳೆದಾಡಿದ್ದಾನೆ ಎನ್ನಲಾಗಿದೆ.

ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ವ್ಯಕ್ತಿಯನ್ನು ಹಿಡಿದಿದ್ದಾರೆ. ದಸರಾ ಕಾರ್ಯಕ್ರಮದ ವೇಳೆ ನಡೆದ ಈ ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.