logo
WhatsApp Image 2026-04-02 at 14.46.04.jpeg
hindalco everlast.jpeg

ಮಡಿಯಾಲದಲ್ಲಿ ಶೀಘ್ರ ಎಐ ಅಧ್ಯಯನ ಕೇಂದ್ರ: ಸದ್ಗುರು ಶ್ರೀ ಮಧುಸೂದನ ಸಾಯಿ

ಟ್ರೆಂಡಿಂಗ್
share whatsappshare facebookshare telegram
13 Sept 2026
post image

ಮಂಗಳೂರು: ಲೋಕಸೇವಾ ವೃಂದದ ಸಂಸ್ಥಾಪಕ ಮಡಿಯಾಲ ನಾರಾಯಣ ಭಟ್ಟರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಮಡಿಯಾಲ ಗ್ರಾಮದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಹಾಗೂ ಕಂಪ್ಯೂಟರ್ ಸೈನ್ಸ್‌ಗೆ ಒತ್ತು ನೀಡುವ ಉನ್ನತ ಶಿಕ್ಷಣ ಕೇಂದ್ರ ನವೆಂಬರ್‌ನಲ್ಲಿ ಕಾರ್ಯಾರಂಭಗೊಳ್ಳಲಿದೆ. 2027ರ ಜೂನ್‌ನಿಂದ ವಿದ್ಯಾರ್ಥಿಗಳ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದರು.

ಮಂಗಳೂರಿನಲ್ಲಿ ಶನಿವಾರ ನಡೆದ ‘ದಿವ್ಯ ಸಂಜೆ’ ಸಂವಾದ ಕಾರ್ಯಕ್ರಮದಲ್ಲಿ ಉದ್ಯಮಿ ಉಲ್ಲಾಸ್ ಕಾಮತ್ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮಡಿಯಾಲ ನಾರಾಯಣ ಭಟ್ಟರ ಜನ್ಮಶತಮಾನೋತ್ಸವದ ಅಂಗವಾಗಿ ಅವರ ಸ್ಮರಣಾರ್ಥ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಉನ್ನತ ಶಿಕ್ಷಣ ಕೇಂದ್ರವನ್ನು ಮಡಿಯಾಲದಲ್ಲಿ ಆರಂಭಿಸಲಾಗುತ್ತಿದೆ ಎಂದು ಹೇಳಿದರು.

ಮಂಗಳೂರು ನಗರದಲ್ಲಿ ವಿವಿಧ ಶಿಕ್ಷಣ ಕೋರ್ಸ್‌ಗಳು ಲಭ್ಯವಿದ್ದು, ಇದಕ್ಕೆ ಮತ್ತಷ್ಟು ಮೆರಗು ನೀಡುವ ಉದ್ದೇಶದಿಂದ ಎಐ, ಮಷೀನ್ ಲರ್ನಿಂಗ್ ಹಾಗೂ ಕಂಪ್ಯೂಟರ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮಡಿಯಾಲದಲ್ಲಿ ಸ್ಥಾಪನೆಯಾಗಲಿರುವ ಎಐ ಮತ್ತು ಕಂಪ್ಯೂಟರ್ ಸೈನ್ಸ್ ಅಧ್ಯಯನ ಕೇಂದ್ರಗಳು ಭಾರತದ ಸನಾತನ ಜ್ಞಾನ ಪರಂಪರೆಯೊಂದಿಗೂ ಬೆಸೆದುಕೊಂಡಿರಲಿವೆ ಎಂದು ಅವರು ಹೇಳಿದರು.

‘ಸನಾತನ ಧರ್ಮಕ್ಕೆ ತಂತ್ರಜ್ಞಾನ ಹೊರತಲ್ಲ’

ಕೃತಕ ಬುದ್ಧಿಮತ್ತೆ ಸೇರಿದಂತೆ ಯಾವುದೇ ಅತ್ಯಾಧುನಿಕ ತಂತ್ರಜ್ಞಾನ ಸನಾತನ ಧರ್ಮಕ್ಕೆ ಹೊರತಾದುದಲ್ಲ. ಅಧ್ಯಾತ್ಮದಲ್ಲಿ ಉನ್ನತ ಸಾಧನೆ ಮಾಡಿದ್ದ ನಮ್ಮ ಋಷಿಗಳು ವಿಜ್ಞಾನಿಗಳೂ ಆಗಿದ್ದರು. ಜ್ಞಾನಕ್ಕೆ ಯಾವುದೇ ಭೇದವಿಲ್ಲ ಎಂಬುದನ್ನು ತಾಯಿ ಸರಸ್ವತಿಯ ಪರಿಕಲ್ಪನೆ ತಿಳಿಸುತ್ತದೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದರು.

ಸನಾತನ ಧರ್ಮವು ಪುರಾತನ ಮೌಲ್ಯಗಳಷ್ಟೇ ಅಲ್ಲ, ನಿತ್ಯನೂತನವೂ ಆಗಿದೆ. ಜಗತ್ತಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ತಿಳಿದುಕೊಂಡು, ಭವಿಷ್ಯದಲ್ಲಿ ಎದುರಾಗಬಹುದಾದ ಬದಲಾವಣೆಗಳಿಗೆ ಸ್ಪಂದಿಸುವ ಅಗತ್ಯವಿದೆ. ಉಚಿತ ಶಿಕ್ಷಣ ಪಡೆಯುತ್ತಿರುವ ಕಾರಣಕ್ಕೆ ನಮ್ಮ ಮಕ್ಕಳು ಅತ್ಯಾಧುನಿಕ ವಿಚಾರಗಳಿಂದ ವಂಚಿತರಾಗಬಾರದು ಎಂದು ಅವರು ಅಭಿಪ್ರಾಯಪಟ್ಟರು.

‘ಮಂಗಳೂರಿಗೆ ಏನು ಕೊಡುಗೆ ನೀಡಬಹುದು ಎಂದು ಯೋಚಿಸುತ್ತಿದ್ದೆ’

ಮಂಗಳೂರಿಗೆ ಬರಲು ಇಷ್ಟು ತಡವಾಗಿದ್ದೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಂಗಳೂರಿನವರಿಗೆ ತಾನು ಏನು ಕೊಡುಗೆ ನೀಡಬಹುದು ಎಂಬುದನ್ನು ಯೋಚಿಸುತ್ತಿದ್ದೆ. ಇದೀಗ ಮಡಿಯಾಲದಲ್ಲಿ ಮಡಿಯಾಲ ನಾರಾಯಣ ಭಟ್ಟರ ಸ್ಮರಣಾರ್ಥ ಉನ್ನತ ಶಿಕ್ಷಣ ಕೇಂದ್ರ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಆ ಕೊಡುಗೆ ನೀಡುವ ಅವಕಾಶದೊಂದಿಗೆ ಮಂಗಳೂರಿಗೆ ಬಂದಿದ್ದೇನೆ ಎಂದರು.

ಸಿಎಸ್‌ಆರ್‌ ನಿಧಿಯ ಸಮರ್ಪಕ ಬಳಕೆಯ ಅಗತ್ಯವನ್ನೂ ಅವರು ಒತ್ತಿ ಹೇಳಿದರು. ಸರ್ಕಾರಕ್ಕೆ ತೆರಿಗೆಯ ಮೇಲಿರುವ ಹಕ್ಕಿನಂತೆ, ಕಾರ್ಪೊರೇಟ್ ಸಂಸ್ಥೆಗಳಿಗೆ ಲಾಭದ ಮೇಲಿರುವ ಹಕ್ಕಿನಂತೆ ಸೇವಾ ಚಟುವಟಿಕೆಗಳನ್ನು ನಡೆಸುವ ಸಂಸ್ಥೆಗಳಿಗೂ ಸಿಎಸ್‌ಆರ್‌ ನಿಧಿಯ ಮೇಲೆ ಹಕ್ಕು ಇರಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ್ ಆಳ್ವ, ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಭಟ್, ಕ್ಯಾಂಪ್ಕೋ ಅಧ್ಯಕ್ಷ ಸತೀಶ್ ಚಂದ್ರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ವೈದಿಕ ಅಧ್ಯಯನ ವಿಭಾಗದ ವಿದ್ಯಾರ್ಥಿನಿಯರ ವೇದಘೋಷದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.