logo
WhatsApp Image 2026-04-02 at 14.46.04.jpeg
hindalco everlast.jpeg

ಟಿವಿ ವರದಿಗಾರನ ಮೇಲೆ ವಕೀಲನಿಂದ ಮಾರಣಾಂತಿಕ ಹಲ್ಲೆ

ಟ್ರೆಂಡಿಂಗ್
share whatsappshare facebookshare telegram
23 Nov 2021
post image

ಮಂಗಳೂರು: ಟಿವಿ ವರದಿಗಾರನ ಮೇಲೆ ವಕೀಲನೋರ್ವ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಪಬ್ಲಿಕ್ ಟಿವಿ ವರದಿಗಾರ ಸುಖ್‌ಪಾಲ್ ಪೊಳಲಿ ಅವರ ಮೇಲೆ ಹಲ್ಲೆ ನಡೆದಿದ್ದು, ಅವರ ತಲೆಗೆ ತೀವ್ರ ತರದ ಗಾಯವಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹಲ್ಲೆ ನಡೆಸಿದ ಆರೋಪಿಯನ್ನು ವಕೀಲ ಯದುನಂದನ್ ಎಂದು ಗುರುತಿಸಲಾಗಿದೆ. ವೈಯಕ್ತಿಕ ವಿಚಾರದ ದ್ವೇಷದಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ. ಆರೋಪಿ ನಿನ್ನೆ ಸಂಜೆ ರಾಡ್‌ನಿಂದ ಸುಖ್‌ಪಾಲ್ ಮೇಲೆ ಹಲ್ಲೆ ನಡೆಸಿದ್ದನು ಎಂದು ತಿಳಿದುಬಂದಿದೆ.

ಆರೋಪಿ ಯದುನಂದನ್ ನನ್ನು ಉರ್ವ ಠಾಣಾ ಪೊಲೀಸರು ಬಂಧಿಸಿ, ಆತನ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.

ಸುಖಪಾಲ್ ಪೊಳಲಿ ಅವರ ಮೇಲಿನ ಹಲ್ಲೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದೆ. ಈ ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರನ್ನು ಇಂದು ಭೇಟಿ ಮಾಡಿ ತಪ್ಪಿತಸ್ಥತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.