



ಉಡುಪಿ,: ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕೌಶಲ್ಯ ರೋಜ್‌ಗಾರ್ ಮೇಳ- ಉದ್ಯೋಗ ಮೇಳ ಕಾರ್ಯಕ್ರಮವು ಫೆಬ್ರವರಿ 19 ರಂದು ಬೆಳಗ್ಗೆ 9.30 ಕ್ಕೆ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ್, ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ. ಸುನೀಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ಎಲ್.ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಎಲೆಕ್ಟಾçನಿಕ್ಸ್, ಐ.ಟಿ-ಬಿ.ಟಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಏಕ್‌ರೂಪ್ ಕೌರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತ ಡಾ. ರಾಗಪ್ರಿಯ ಆರ್, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.