



ಉಡುಪಿ:
ಆರ್ಥಿಕ ಸಂಕಷ್ಟದಿಂದ ಬೇಸತ್ತ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದ್ರಾಳಿ ದೇವಸ್ಥಾನದ ಬಳಿ ಡಿ.9ರಂದು ಸಂಜೆ ನಡೆದಿದೆ. ಮೃತರನ್ನು ಬಾಗಲಕೋಟೆ ನಿವಾಸಿ 23ವರ್ಷದ ತಮ್ಮಣ್ಣ ಬೋರನಟ್ಟಿ ಎಂದು ಗುರುತಿಸಲಾಗಿದೆ. ಈತ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಸರಕು ಸಾಗಾಟದ ರೈಲಿನಲ್ಲಿ ಬರುವ ಸಾಮಾಗ್ರಿಗಳನ್ನು ಇಳಿಸುವ ಕೆಲಸ ಮಾಡಿಕೊಂಡಿದ್ದನು. ಇಂದ್ರಾಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಹಣಕಾಸಿನ ಅಡಚಣೆಯಿಂದ ಮನನೊಂದ ಈತ ನಿನ್ನೆ ಸಂಜೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮಣಿಪಾಲ ಠಾಣಾಧಿಕಾರಿ ಸುಧಾಕರ್ ತೋನ್ಸೆ ಅವರು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ವೈದ್ಯಕೀಯ ಪರೀಕ್ಷಾಕೇಂದ್ರಕ್ಕೆ ಸಾಗಿಸಲು ನೆರವಾದರು. ಈ ಬಗ್ಗೆ ಮಣಿಪಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.