logo
Udupi Express  (1400px x 300px).jpg
SHARADA TECHERS.jpeg
hindalco everlast.jpeg

ಸಿಒಡಿಪಿ ಸಮಾಜ ಸೇವಾ ಸಂಸ್ಥೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು.

ಟ್ರೆಂಡಿಂಗ್
share whatsappshare facebookshare telegram
21 Oct 2024
post image

ಮಂಗಳೂರು: ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ ಶ್ರೀಮಾನ್ ಮೈಕಲ್ ಡಿಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ವಂ.ಪೀಟರ್ ಪೌಲ್ ಸಲ್ಡಾನ್ಹ ವಹಿಸಿ, ಸಾಂಕೇತಿಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಬಡ್ಡಿರಹಿತ ಸಾಲರೂಪದ ನೆರವನ್ನು ಹಸ್ತಾಂತರಿಸಿ ಈ ಕಾರ್ಯಕ್ರಮಕ್ಕೆ ಶುಭ ನುಡಿದರು.

ಶ್ರೀಮಾನ್ ಮೈಕಲ್ ಡಿ ಸೋಜ ರವರು ಹೆತ್ತವರ ಬಗ್ಗೆ ಕಾಳಜಿ ವಹಿಸಿ, ಸಮಾಜದಲ್ಲಿ ಉತ್ತಮ ನಡವಳಿಕೆ ಮತ್ತು ಶಿಕ್ಷಣ ಪಡೆದು, ತಮ್ಮ ಮಾತೃಭಾಷೆಗೆ ಪ್ರಾಮುಖ್ಯತೆ ಕೊಡಬೇಕು ಹಾಗೂ ಹಿರಿಯರು ನಮಗೆ ಮಾಡಿದ ಸಹಾಯವನ್ನು ಎಂದಿಗೂ ಮರೆಯಬಾರದು. ವಿದ್ಯಾಭ್ಯಾಸ ಮುಗಿದ ನಂತರ, ಹೆತ್ತವರನ್ನು ಚೆನ್ನಾಗಿ ನೋಡುವ ಜವಬ್ದಾರಿ ವಹಿಸಿ ಮತ್ತು ತಮ್ಮಿಂದ ಬಡವರಿಗೆ ಸಹಾಯ ಮಾಡುವ ಆಸಕ್ತಿ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅವರ ಧರ್ಮಪತ್ನಿ ಶ್ರೀಮತಿ ಫ್ಲಾವಿಯ ಡಿ ಸೋಜ, ಸಿಒಡಿಪಿ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ| ವಿನ್ಸೆಂಟ್ ಡಿ ಸೋಜ ಮತ್ತು ಸಹ ನಿರ್ದೇಶಕ ವಂದನೀಯ ಫಾ| ಲೊರೆನ್ಸ್ ಕುಟಿನ್ಹಾ ರವರು ಹಾಜರಿದ್ದರು.

ಸಿಒಡಿಪಿ ನಿರ್ದೇಶಕರಾದ ರೆ.ಫಾ. ವಿನ್ಸೆಂಟ್ ಡಿ ಸೋಜ ಶಿಕ್ಷಣ ನಿಧಿಯ ಪ್ರತಿಷ್ಠಾಪಕ ಧಾನಿಗಳಾದ ಶ್ರೀಮಾನ್ ಮೈಕಲ್ ಡಿ ಸೋಜ ಮತ್ತು ಶ್ರೀಮತಿ ಫ್ಲಾವಿಯ ಡಿಸೋಜ ರವರ ಪರಿಚಯ ನೀಡಿದರು. ಬಿಷಪ್‌ರವರು ಅವರಿಗೆ ಗೌರವ ಅರ್ಪಣೆ ಸಲ್ಲಿಸಿದರು.

ಕುಟುಂಬದ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ 103 ವಿದ್ಯಾರ್ಥಿಗಳಿಗೆ ರೂ. 86,60,000/- ಬಡ್ಡಿ ರಹಿತ ಸಾಲವನ್ನು ಬ್ಯಾಂಕಿನ ಮುಖಾಂತರ ವಿತರಿಸಲಾಗುವುದು.

ವಂದನೀಯ ಫಾ| ಲೊರೆನ್ಸ್ ಕುಟಿನ್ಹಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಾರ್ಪನೆಗೈದರು.

WhatsApp Image 2024-10-11 at 1.21.20 PM - Copy.jpeg
WhatsApp Image 2024-10-09 at 8.05.11 PM.jpeg
WhatsApp Image 2024-09-19 at 4.31.45 PM.jpeg
WhatsApp Image 2024-04-29 at 2.40.38 PM.jpeg
sharada.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.