



ಬೆಂಗಳೂರು: ದೆಹಲಿ-ಬೆಂಗಳೂರು ಇಂಡಿಗೊ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆಯಲು ಯತ್ನಿಸಿದ ಆರೋಪದ ಮೇಲೆ 40 ವರ್ಷದ ಪ್ರಯಾಣಿಕರೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಾಯುಯಾನ ಸಂಸ್ಥೆ ಇಂಡಿಗೊದ ಅಧಿಕೃತ ಪ್ರಕಟಣೆ ತಿಳಿಸಿದೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ 7:56ರ ಸುಮಾರಿಗೆ ಇಂಡಿಗೊ-6E 308 ವಿಮಾನದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯನ್ನು ಕಾಸ್ಪುರದ ನವಬಾಗ್‌ಗಂಜ್‌ನ ಪ್ರತೀಕ್ ಎಂದು ಗುರುತಿಸಲಾಗಿದೆ.
ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಪ್ರತೀಕ್ ಪಾನಮತ್ತ ಸ್ಥಿತಿಯಲ್ಲಿ ತುರ್ತು ನಿರ್ಗಮನ ದ್ವಾರ ತೆರೆಯಲು ಪ್ರಯತ್ನಿಸಿದರು’ ಎಂದು ಇಂಡಿಗೊ ಘಟನೆಯನ್ನು ವಿವರಿಸಿದೆ.
ಬೆಂಗಳೂರಿಗೆ ಬಂದ ನಂತರ ಮಹಿಳೆಯನ್ನು ಸಿಐಎಸ್‌ಎಫ್‌ಗೆ ಹಸ್ತಾಂತರಿಸಲಾಯಿತು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.