logo
WhatsApp Image 2026-04-02 at 14.46.04.jpeg
hindalco everlast.jpeg

ರೈಲಿನಲ್ಲಿ ಅಗ್ನಿ ಅವಘಡ: 8 ಮಂದಿ ಸಾವು

ಟ್ರೆಂಡಿಂಗ್
share whatsappshare facebookshare telegram
26 Aug 2023
post image

ಮಧುರೈ: ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿ, 8 ಜನ ಮೃತಪಟ್ಟಿರುವ ಘಟನೆ ಮಧುರೈ ರೈಲು ನಿಲ್ದಾಣದಲ್ಲಿ ನಡೆದಿದೆ.

ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮೃತರು ಉತ್ತರ ಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಮಧುರೈನಲ್ಲಿ ನಿಲ್ಲಿಸಿದ್ದ ಈ ರೈಲು ತಿರುಪತಿ-ರಾಮೇಶ್ವರಂ-ಕನ್ಯಾಕುಮಾರಿ ಮುಂತಾದ ಸ್ಥಳಗಳಿಗೆ ಪ್ರಯಾಣಿಸಬೇಕಿತ್ತು.

ಪ್ರಾಥಮಿಕ ಮಾಹಿತಿ ಪ್ರಕಾರ ಈ ರೈಲಿನಲ್ಲಿದ್ದ ಭಕ್ತರು ಗ್ಯಾಸ್ ಸಿಲಿಂಡರ್ ಬಳಸಿ ಅಡುಗೆ ಮಾಡುತ್ತಿದ್ದ ಕಾರಣ ಬೆಂಕಿ ಹೊತ್ತಿಕೊಂಡಿದೆ. ಒಂದು ಬೋಗಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೇರೆ ಬೋಗಿಗಳಿಗೆ ಬೆಂಕಿ ವ್ಯಾಪಿಸಿದೆ. ರೈಲಿನಲ್ಲಿ 60ಕ್ಕೂ ಹೆಚ್ಚು ಮಂದಿ ಇದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.