



ಬೆಂಗಳೂರು: ನಗರದ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ರೈಲಿನ ಎರಡು ಕೋಚ್ಗಳಿಗೆ ಆವರಿಸಿದೆ. ಇದನ್ನು ಕಂಡು ಪ್ರಯಾಣಿಕರು ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಧಿಡೀರ್ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ರೈಲ್ವೆ ನಿಲ್ದಾಣ , ಮೆಜೆಸ್ಟಿಕ್ ಬಸ್ ನಿಲ್ದಾಣದವರೆಗೆ ಹೊಗೆ ಆವರಿಸಿದೆ. ರೈಲು ಬೆಳಗ್ಗೆ 6 ಗಂಟೆಗೆ ಕೆಎಸ್ಆರ್ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಬೆಳಗ್ಗೆ 7.30 ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸದ್ಯ ಬೆಂಕಿ ತಗುಲಿದ ಬೋಗಿಯಿಂದ ಉಳಿದ ಬೋಗಿಗಳನ್ನು ಬೇರ್ಪಡಿಸಲಾಗಿದೆ. ಅದೃಷ್ಟವಶಾವತ್ ಯಾವುದೆ ಪ್ರಯಾಣಿಕರು ರೈಲಿನಲ್ಲಿ ಇರಲಿಲ್ಲ.
ಬೆಳಗ್ಗೆ ಮುಂಬೈನಿಂದ 6 ಗಂಟೆಗೆ ರೈಲು ಕೆಎಸ್ಆರ್ಗೆ ಬಂದು ನಿಂತಿದೆ. 7.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ರೈಲಿನಲ್ಲಿ ಪ್ರಯಾಣಿಕರು ಇರಲಿಲ್ಲ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ. ತನಿಖೆ ಬಳಿಕ ಘಟನೆಗೆ ಕಾರಣ ಏನು ಎಂಬುವುದು ಗೊತ್ತಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.