



ಮುಂಬಯಿ:ಕಂಜುರ್ಮಾರ್ಗ್‌ನಲ್ಲಿರುವ ಸ್ಯಾಮ್‌ಸಂಗ್ ಸೇವಾ ಕೇಂದ್ರದಲ್ಲಿ ನಿನ್ನೆ ರಾತ್ರಿಭಾರಿ ಬೆಂಕಿ ಕಾಣಿಸಿಕೊಂಡಿದೆ.ಹತ್ತು ಅಗ್ನಿಶಾಮಕ ವಾಹನಗಳು ಮತ್ತು ನಾಲ್ಕು ನೀರಿನ ಟ್ಯಾಂಕರ್‌ಗಳು ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿವೆ.
ರಾತ್ರಿ 9.42ಕ್ಕೆ ಕಟ್ಟಡದ 2ನೇ ಮಹಡಿಯಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ. ನಂತರ ಅದನ್ನು ರಾತ್ರಿ 11 ರ ಹೊತ್ತಿಗೆ ಮೂರನೇ ಮಹಡಿಗೆ ಹಬ್ಬಿದ್ದು, ಬೆಂಕಿ ತೀವ್ರತೆ ಹೆಚ್ಚಾಗಿತ್ತು.
ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ವಾರ್ಡ್ ಮಟ್ಟದ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಲು ನೆರವಾಗಿದ್ದರು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.