logo
WhatsApp Image 2026-04-02 at 14.46.04.jpeg
hindalco everlast.jpeg

ಸಾಣೂರು ಗ್ರಾಮದಲ್ಲಿ ಬೆಂಕಿ ಆಕಸ್ಮಿಕ‌; ಗಾಯಾಳು ವೃದ್ಧೆ ಸಾವು

ಟ್ರೆಂಡಿಂಗ್
share whatsappshare facebookshare telegram
8 May 2022
post image

ಕಾರ್ಕಳ : ಓಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ‌ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ನಡೆದಿದೆ. ಸಾಣೂರು ಗ್ರಾಮದ ನಿವಾಸಿ 71 ವರ್ಷದ ಸುಮತಿ ಶೆಟ್ಟಿ ಮೃತ ದುರ್ದೈವಿ. ಇವರು ಏ.4ರಂದು ಬೆಳಿಗ್ಗೆ ಅಡುಗೆ ಮನೆಯಲ್ಲಿ ಕಟ್ಟಿಗೆ ಓಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಆಕಸ್ಮಿಕವಾಗಿ ಸೀರೆಯ ಸೆರಗಿಗೆ ಬೆಂಕಿ ತಗಲಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡವರನ್ನು ಆಳ್ವಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿ ಮನೆಗೆ ಬಂದಿದ್ದರು. ಕೆಲವು ದಿನಗಳ ಬಳಿಕ ಗಾಯ ಮತ್ತೆ ಉಲ್ಬಣಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆ ಹಾಗೂ ಉಡುಪಿ ಅಜ್ಜರಕಾಡಿನ ಆಸ್ಪತ್ರೆ ದಾಖಲಿಸಲಾಗಿತ್ತು. ಆ ನಂತರ ಏ.30ರಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮತಿ‌ ಶೆಟ್ಟಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೇ.7ರಂದು ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.