



ಉಡುಪಿ: ಆಕಸ್ಮಿಕವಾಗಿ ಬೆಂಕಿ ತಗುಲಿ ಲಂಗರು ಹಾಕಿದ್ದ ಏಳು ಬೋಟ್ ಗಳು ಸುಟ್ಟು ಕರಕಲಾದ ಘಟನೆ ಬೈಂದೂರು ತಾಲೂಕಿನ ಗಂಗೊಳ್ಳಿ ಬಂದರಿನಲ್ಲಿ ನಡೆದಿದೆ. ಆರಂಭದಲ್ಲಿ ಒಂದು ಬೋಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆ ಬಳಿಕ ಬೆಂಕಿಯ ಕೆನ್ನಾಲಿಗೆ ಅಕ್ಕ ಪಕ್ಕದ ಏಳು ಮೀನುಗಾರಿಕಾ ಬೋಟುಗಳಿಗೂ ಹಬ್ಬಿದ್ದು ಏಳು ಬೋಟ್ ಗಳು ಬೆಂಕಿಗಾಹುತಿಯಾಗಿವೆ. ದೀಪಾವಳಿ ಪ್ರಯುಕ್ತ ಮೀನುಗಾರರು ಪೂಜೆ ನಡೆಸುತ್ತಿದ್ದ ವೇಳೆ ಈ ಅಗ್ನಿ ದುರಂತ ಸಂಭವಿಸಿದೆ ಎನ್ನಲಾಗಿದೆ. ಪಟಾಕಿ ಸಿಡಿದು ಬೆಂಕಿ ಹಬ್ಬಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಬೆಂಕಿ ಇನ್ನೂ ಹತೋಟಿಗೆ ಬಂದಿಲ್ಲ. ಅವಘಡದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.