logo
WhatsApp Image 2026-04-02 at 14.46.04.jpeg
hindalco everlast.jpeg

ಡೊನಾಲ್ಡ್​ ಟ್ರಂಪ್​ ಅವರ ಮೇಲೆ ಗುಂಡಿನ ದಾಳಿ: ಪ್ರಧಾನಿ ಮೋದಿ ಖಂಡನೆ..!

ಟ್ರೆಂಡಿಂಗ್
share whatsappshare facebookshare telegram
14 Jul 2024
post image

ವಾಷಿಂಗ್ಟನ್: ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ​ ಮೇಲೆ ಗುಂಡಿನ ದಾಳಿ ನಡೆದಿದೆ. ಅವರು ದಾಳಿಯಿಂದ ನನ್ನ ಮೇಲ್ಬಾಗದ ಕಿವಿ ಗಾಯಗೊಂಡಿದೆ, ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆದಿರುವುದನ್ನು ನಂಬಲಾಗುತ್ತಿಲ್ಲ. ಈ ಘಟನೆಯಲ್ಲಿ ಗಾಯಗೊಂಡವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ. ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆಂದು ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತೊಂದು ಪೋಸ್ಟ್ ನಲ್ಲಿ ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆದಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಶೂಟರ್ ಹತ್ಯೆಯಾಗಿರುವ ಬಗ್ಗೆ ಏನೂ ತಿಳಿದಿಲ್ಲ. ಘಟನೆ ವೇಳೆ ಯುನೈಟೆಡ್ ಸ್ಟೇಟ್ಸ್ ಸೀಕ್ರೆಟ್ ಸರ್ವೀಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಕೈಗೊಂಡ ತ್ವರಿತ ಕ್ರಮಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆಂದು ತಿಳಿಸಿದ್ದಾರೆ.

ಗುಂಡಿನ ದಾಳಿ, ಪ್ರಧಾನಿ ಮೋದಿ ಖಂಡನೆ:

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ್‍ಯಾಲಿ ಮೇಲೆ ನಡೆದ ಗುಂಡಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ. ತನ್ನ ಸ್ನೇಹಿತನ ಮೇಲೆ ನಡೆದಿರುವ ಹಲ್ಲೆಯಿಂದ ಬೇಸರಗೊಂಡಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಅವಕಾಶವಿಲ್ಲ, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ ಎಂದು ತಮ್ಮ ಎಕ್ಸ್​ ಪೋಸ್ಟ್​ನಲ್ಲಿ ಬರೆದಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.