



ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ 15 ರಿಂದ 29 ವರ್ಷದೊಳಗಿನ ಯುವಜನರಿಗೆ ಜಾನಪದ ಕಲಾಪ್ರಕಾರಗಳ 8 ದಿನಗಳ ತರಬೇತಿ ಶಿಬಿರವನ್ನು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದ್ದು, ಅರ್ಹ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.