



ಕಾರ್ಕಳ : ಜಾನಪದ ಸಾಹಿತ್ಯ ಜನಜೀವನದ ಜೊತೆಗೆ ಮಣ್ಣಿನ ಸಂಸ್ಕೃತಿಯಾಗಿ ಹುಟ್ಟಿ ಬೆಳೆದಿದೆ. ಇದು ಅತ್ಯಂತ ಶ್ರೀಮಂತವಾದ ಸಾಹಿತ್ಯ ಎಂದು ಕಾರ್ಕಳ ವೆಂಕಟರಮಣ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಪಿ ಶೆಣೈ ಹೇಳಿದರು.
ಎಸ್.ವಿ.ಟಿ ಅಂಡಾರು ವಿಠಲ ರುಕ್ಮಿಣಿಕಿಣಿ ಸಾಂಸ್ಕೃತಿಕ ಸಭಾಂಗಣದಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಇವುಗಳ ಆಶ್ರಯದಲ್ಲಿ ತಾಲ್ಲೂಕು ಜಾನಪದ ಪರಿಷತ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಾನಪದ ಸಾಹಿತ್ಯ, ಕಲೆ ಉಳಿಯಬೇಕು ಜಾನಪದ ಕಲೆಯ ಶ್ರೀಮಂತಿಕೆಯನ್ನು ಯುವಜನತೆಗೆ ತಿಳಿಸುವಂತಾಗಬೇಕು ಎಂದರು.
ತಾಲ್ಲೂಕು ಘಟಕದ ಅಧ್ಯಕ್ಷರಾಗಿ ದೇವದಾಸ್ ಹಾಗೂ ತಂಡ ಅಧಿಕಾರ ಸ್ವೀಕರಿಸಿದರು.
ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಗಣೇಶ್ ಗಂಗೊಳ್ಳಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಕನ್ನಡ ಜಾನಪದ ಪರಿಷತ್ ಕರಾವಳಿ ಜಿಲ್ಲೆಗಳ ವಿಭಾಗೀಯ ಸಂಚಾಲಕಿ ಡಾ. ಭಾರತಿ ಮರವಂತೆ ಶುಭಾಶಂಸನೆ ಗೈದರು.
ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಎಸ್.ವಿ.ಟಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮದಾಸ ಪ್ರಭು, ಎಸ್.ವಿ.ಟಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಮುಖ್ಯಶಿಕ್ಷಕ ಯೋಗೇಂದ್ರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಸಂಚಾಲಕ ಚಂದ್ರನಾಥ್ ಬಜಗೋಳಿ ಸ್ವಾಗತಿಸಿದರು. ಗಣೇಶ್ ಜಾಲ್ಸೂರು ನಿರೂಪಿಸಿದರು. ಕಾರ್ಯದರ್ಶಿ ಮಂಜುನಾಥ್ ಕೆ. ಶಿವಪುರ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.