



ಮುಂಬೈ : ಲೋಕಲ್ ರೈಲು ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದರ ಅನುಸಾರ ಮುಂಬೈನ ಲೋಕಲ್ ರೈಲಿನಲ್ಲಿ ಪ್ರಯಾಣಿಸುವವರು ಎರಡೂ ಡೋಸ್ ಕೋವಿಡ್ ಲಸಿಕೆಗಳನ್ನು ಪಡೆದಿರಬೇಕಾದುದು ಕಡ್ಡಾಯವಾಗಿದೆ. ಮಹಾರಾಷ್ಟ್ರದಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಹಲವಾರು ಕಂಪನಿಗಳಲ್ಲಿ ಈಗಾಗಲೇ ಉದ್ಯೋಗಿಗಳನ್ನು ಕಚೇರಿಗೆ ಕರೆಯಲಾಗಿದೆ. ಕಚೇರಿಯಿಂದ ಕೆಲಸ ನಿರ್ವಹಿಸುವವರು, ಕಾರ್ಮಿಕರು ಮತ್ತು ಸರ್ಕಾರಿ ನೌಕರರಿಗೆ ಮುಂಬೈ ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸಲು ಸಂಪೂರ್ಣ ವ್ಯಾಕ್ಸಿನೇಷನ್ ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ. ಕೋವಿಡ್ -19 ಲಸಿಕೆಯ ಎರಡೂ ಡೋಸ್‌ಗಳನ್ನು ಹಾಕಿಸಿಕೊಂಡ ಹಾಗೂ ಎರಡನೇ ಡೋಸ್ ಹಾಕಿಸಿಕೊಂಡು 14 ದಿನಗಳು ಕಳೆದುಹೋದ ಜನರನ್ನು ಸಂಪೂರ್ಣ ಲಸಿಕೆ ಹಾಕಿಸಿಕೊಂಡ ವ್ಯಕ್ತಿ ಎಂದು ಪರಿಗಣಿಸಲಾಗುತ್ತದೆ ಎಂದು ಮಾರ್ಗಸೂಚಿಯ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.