logo
WhatsApp Image 2026-04-02 at 14.46.04.jpeg
hindalco everlast.jpeg

ಆಹಾರ ಸುರಕ್ಷತಾ ತಪಾಸಣೆ, ತಪ್ಪು ಮಾಡಿದರೆ ಅವರು ಎಷ್ಟೇ ದೊಡ್ಡವರಾದ್ರೂ ಶಿಕ್ಷೆ:ಯು.ಟಿ.ಖಾದರ್

ಟ್ರೆಂಡಿಂಗ್
share whatsappshare facebookshare telegram
17 Aug 2026
post image

ಮಂಗಳೂರು:** ಆಹಾರ ಸುರಕ್ಷತಾ ತಪಾಸಣೆಯಲ್ಲಿ ಎಷ್ಟೇ ದೊಡ್ಡವರಾಗಿದ್ದರೂ, ಸಣ್ಣವರಾಗಿದ್ದರೂ ಯಾರನ್ನೂ ಬಿಡುವುದಿಲ್ಲ. ಜನರ ಆರೋಗ್ಯವೇ ಸರ್ಕಾರದ ಮೊದಲ ಆದ್ಯತೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಆಹಾರ ತಯಾರಿಸುವ ಹಾಗೂ ವಿತರಿಸುವ ಸ್ಥಳಗಳು ಮತ್ತು ಆಹಾರ ಉತ್ಪಾದನಾ ಕೇಂದ್ರಗಳನ್ನು ಗುರುತಿಸಿ ರಾಜ್ಯಾದ್ಯಂತ ತಪಾಸಣೆ ಆರಂಭಿಸಲಾಗಿದೆ. ಈ ತಪಾಸಣೆ ಯಾರ ಮೇಲಿನ ವೈಯಕ್ತಿಕ ಕೋಪದಿಂದ ನಡೆಸುತ್ತಿರುವುದಲ್ಲ. ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯದಲ್ಲಿ ಏನಾದರೂ ಲೋಪಗಳಿದ್ದರೆ ಅವುಗಳನ್ನು ಗುರುತಿಸಿ, ವಾಸ್ತವ ಪರಿಸ್ಥಿತಿಯನ್ನು ಜನರಿಗೆ ತಿಳಿಸುವುದು ನಮ್ಮ ಜವಾಬ್ದಾರಿ ಎಂದು ಅವರು ಹೇಳಿದರು.

ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಸೇರಿದಂತೆ ವಿವಿಧ ಆಹಾರ ಮಳಿಗೆಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ನೈರ್ಮಲ್ಯದ ಕೊರತೆ ಹಾಗೂ ಆಹಾರದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಬೆಂಗಳೂರಿನಲ್ಲಿ ವಿವಿಧ ಆಹಾರ ಮಳಿಗೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಅದೇ ರೀತಿಯ ಕ್ರಮ ಮಂಗಳೂರಿನಲ್ಲೂ ನಡೆಯಲಿದೆ. ನಿನ್ನೆ ಮಾಹಿತಿ ಲಭ್ಯವಾದ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಿಸಿದ ಮಳಿಗೆಯನ್ನು ತಕ್ಷಣ ಸೀಲ್ ಮಾಡಿದ್ದಾರೆ ಎಂದರು.

ಮುಂದಿನ ದಿನಗಳಲ್ಲೂ ಇಂತಹ ತಪಾಸಣೆಗಳು ರಾಜ್ಯಾದ್ಯಂತ ಮುಂದುವರಿಯಲಿವೆ. ಹೀಗಾಗಿ ಎಲ್ಲಾ ಆಹಾರ ಮಳಿಗೆಗಳ ಮಾಲೀಕರು ತಮ್ಮ ಅಡುಗೆಮನೆ, ಸ್ಟೋರ್‌ ರೂಂ ಹಾಗೂ ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಬೇಕು. ಯಾವುದೇ ಸಂದರ್ಭದಲ್ಲಿ, ಎಲ್ಲೆಡೆ ತಪಾಸಣೆ ನಡೆಸುವ ಸಾಧ್ಯತೆ ಇದೆ ಎಂದು ಯು.ಟಿ. ಖಾದರ್ ಎಚ್ಚರಿಕೆ ನೀಡಿದರು.

ಇದೇ ವೇಳೆ, ಒಂದು ಆಹಾರ ಮಳಿಗೆಯ ಕೋಲ್ಡ್‌ ರೂಂನಲ್ಲಿ ಸುಮಾರು ಎಂಟು ತಿಂಗಳಿನಿಂದ ಸಂಗ್ರಹಿಸಿಡಲಾಗಿತ್ತು ಎನ್ನಲಾದ ಕೋಳಿ ಮಾಂಸವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.